
ಮಂಗಳೂರು, ಮೇ.26: ಕೊರೋನಾ ಎರಡನೇ ಅಲೆಯಿಂದ ಸಂಕಷ್ಟ ಎದುರಿರಿಸುತ್ತಿರುವ ಮುಂಚೂಣಿ ಕಾರ್ಯಕರ್ತರಿಗೆ ಮಂಗಳೂರು ದಕ್ಷಿಣ ಬಿಜೆಪಿ ಯುವ ಮೋರ್ಚದ ಅಧ್ಯಕ್ಷ ಸಚಿನ್ ರಾಜ್ ರೈ ಅವರ ನೇತೃತ್ವದಲ್ಲಿ ದಿನಸಿ ಸಾಮಾಗ್ರಿಗಳ ಕಿಟ್ ಗಳ ವಿತರಣಾ ಕಾರ್ಯಕ್ರಮ ನಗರದ ಗಾಂಧಿನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯಿತು.
ಕೋವಿಡ್ ವಾರಿಯರ್ ಗಳಾದ ಅಂಗನವಾಡಿ ಕಾರ್ಯಕರ್ತೆಯರು, ಅನುದಾನ ರಹಿತ ಶಾಲಾ ಶಿಕ್ಷಕಿಯರು, ದಾದಿಯರು ಮತ್ತು ಕೋವಿಡ್ ಸಂದರ್ಭ ದಲ್ಲಿ ಶವ ಸಂಸ್ಕಾರ ನಡೆಸುತ್ತಿರುವ ಬಜರಂಗದಳದ ಸ್ವಯಂ ಸೇವಕ ರು ಸೇರಿದಂತೆ ೨೫೦ಕ್ಕೂ ಅಧಿಕ ಮಂದಿಗೆ ಮಂಗಳೂರಿನ ಗಾಂಧಿನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನ ಸೇರಿದಂತೆ ನಾಲ್ಕು ಕಡೆಗಳಲ್ಲಿ ಕಿಟ್ ವಿತರಣಾ ಕಾರ್ಯಕ್ರಮ ನಡೆಯಿತು.

ಮಂಗಳೂರಿನ ಶಾರದೋತ್ಸವ ಸಮಿತಿ ಕಟ್ಟಡ, ಕದ್ರಿ ವಿಶ್ವಹಿಂದೂ ಪರಿಷತ್ ನ ವಿಶ್ವಶ್ರೀ ಕಟ್ಟಡ, ಶಕ್ತಿನಗರದ ಆರೋಗ್ಯ ಕೇಂದ್ರದಲ್ಲಿ ಕಿಟ್ ವಿತರಣೆ ನಡೆಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶ ನ್ ಮೂಡಬಿ ದಿರೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯ ಕರ್ತರಿಗೆ ಕ್ರತಜ್ಞತೆ ಸಲ್ಲಿಸಿದರು.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರು,ರಾಜ್ಯಾಧ್ಯಕ್ಷರ ಸೂಚನೆಯ ಮೆರೆಗೆ ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಸಮಾಜದ ದುರ್ಬಲರಿಗೆ, ಮುಂಚೂಣಿ ಕಾರ್ಯಕರ್ತರಿಗೆ ನೆರವಾಗಲು ನೀಡಿರುವ ಕರೆಯಂತೆ ಜಿಲ್ಲೆ ಯಾದ್ಯಂತ ಇಂತಹ ಚಟುವಟಿಕೆಗಳನ್ನು ನಡೆಸುತ್ತಿರುವ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿನ್ ರಾಜ್ ರೈ ಮತ್ತು ಅವರ ಕುಟುಂಬದ ಸದಸ್ಯರು ದಿನಸಿ ಸಾಮಾಗ್ರಿಗಳ ಕಿಟ್ ಗಳನ್ನು ಕೊಡುಗೆ ನೀಡಿರುವುದಕ್ಕೆ ಕ್ರತಜ್ಞತೆ ಸಲ್ಲಿಸಿದರು.

ರಾಜ್ಯ ಬಿಜೆಪಿ ಪರಿಷತ್ ನ ಮಾಜಿ ಸದಸ್ಯ ರಾಜ್ ಗೋಪಾಲ ರೈ ಮಾರ್ಗದರ್ಶನದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮಂಗಳೂರು ಬಿಜೆಪಿ ಜಿಲ್ಲಾ ವಕ್ತಾರ ಜಗದೀಶ್ ಶೇಣವ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ಉಪಾಧ್ಯಕ್ಷ ಈಶ್ವರ ಕಟೀಲ್,ದಕ್ಷಿಣ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ವಿಜಯ್ ಕುಮಾರ್ ಶೆಟ್ಟಿ, ಶಕ್ತಿ ಕೇಂದ್ರದ ಅಧ್ಯಕ್ಷ ರಮೇಶ್ ಹೆಗ್ಡೆ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಅಮಿತ್ , ಕಾರ್ಪೊರೇ ಟರ್ ಗಳಾದ ಜಯಲಕ್ಷ್ಮಿ ವಿ ಶೆಟ್ಟಿ, ಸಂಧ್ಯಾ ಮೋಹನ್ ಆಚಾರಿ, ಗಣೇಶ್ ಕುಲಾಲ್ ಮತ್ತು ಯುವ ಮೋರ್ಚಾದ ಪದಾಧಿಕಾರಗಳಾದಿ ಜಯರಾಜ್ ಶೆಟ್ಟಿ, ಧುನುಶ್ ರೈ, ಪ್ರಜಯ್ ,ಸುನೀಲ್, ದೀಕ್ಷಿತ್, ಸುಶಾಂತ್, ಪ್ರಥಮ್ , ಸಮರ್ಥ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಯುವ ಮೋರ್ಚ ಮಂಡಲ ಕಾರ್ಯದರ್ಶಿ ಲಲ್ಲೇಶ್ ಕಾರ್ಯಕ್ರಮ ನಿರೂಪಿಸಿದರು.
Comments are closed.