ಕರ್ನಾಟಕ

ಬೆಂಗಳೂರಿನಲ್ಲಿ ಯುವತಿಯ ಮೇಲೆ ಬಾಂಗ್ಲಾ ಯುವಕರಿಂದ ಮೃಗೀಯವಾಗಿ ಅತ್ಯಾಚಾರ, ವಿಡಿಯೋ ವೈರಲ್: ಬಂಧನ, ಮಹಜರು ವೇಳೆ ಪೊಲೀಸರಿಂದ ಫೈರಿಂಗ್

Pinterest LinkedIn Tumblr

ಬೆಂಗಳೂರು: ದೆಹಲಿಯಲ್ಲಿ ನಡೆದ ನಿರ್ಬಯಾ ಪ್ರಕರಣದಂತೆಯೇ ಯುವತಿಯೊಬ್ಬಳ ಮೇಲೆ ಯುವಕರು ಹಾಗೂ ಓರ್ವ ಮಹಿಳೆಯಿದ್ದ ತಂಡ ಸಾಮೂಹಿಕ ಅತ್ಯಾಚಾರವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಮೂರ್ತಿ ನಗರ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದು ಇಂದು ಬೆಳಿಗ್ಗೆ ಮಹಜರು ನಡೆಸಲು ಕರೆದೊಯ್ಯುವಾಗ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಕ್ಕೆ ಪೊಲೀಸರು ಗುಂಡು ಹಾರಿಸಿದ್ದಾರೆ.

ಬಂಧಿತರನ್ನು ಬಾಂಗ್ಲಾದೇಶ ಮೂಲದವರಾದ ಸಾಗರ್, ಮೊಹಮ್ಮದ್ ಬಾಬಾ ಶೇಕ್, ರಿದೋಯ್ ಬಾಬು ಮತ್ತು ಹಕೀಲ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳು ಹಲವು ವರ್ಷಗಳಿಂದ ಅಕ್ರಮವಾಗಿ ರಾಮಮೂರ್ತಿ ನಗರದ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಇವರೆಲ್ಲಾ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು.

ಸಂತ್ರಸ್ತೆ ಹಾಗೂ ಮೊಹಮ್ಮದ್‌ ಬಾಬಾ ಶೇಖ್‌ ಸಂಬಂಧಿಕರಾಗಿದ್ದು, ರಿದಾಯ್‌ ಬಾಬು ಹಾಗೂ ಇತರರ ಜತೆ ಅಕ್ರಮವಾಗಿ ಭಾರತಕ್ಕೆ ಬಂದು ಬೆಂಗಳೂರಿನ ರಾಮಮೂರ್ತಿ ನಗರದ ಎನ್‌ಆರ್‌ ಲೇಔಟ್‌ನಲ್ಲಿ ವಾಸವಾಗಿದ್ದರು. ಬಳಿಕ ಯುವತಿಯನ್ನು ವೇಶ್ಯಾವಾಟಿಕೆಗೆ ದೂಡಿದ್ದರು. ಅದಕ್ಕೆ ಯುವತಿ ಒಪ್ಪದಿದ್ದಾಗ ದೌರ್ಜನ್ಯ ಎಸಗಿದ್ದಾರೆ. ಆಕೆಯ ಗುಪ್ತಾಂಗಕ್ಕೆ ಬಿಯರ್ ಬಾಟಲ್ ಚುಚ್ಚಿ ಮೃಗೀಯವಾಗಿ ದೌರ್ಜನ್ಯ ಎಸಗಿದ್ದಾರೆ. ಬಳಿಕ ಲೈಂಗಿಕ ದೌರ್ಜನ್ಯದ ಕೃತ್ಯವನ್ನು ತಮ್ಮ ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ವಿಕೃತಿ ಮೆರೆದಿದ್ದಾರೆ.

ಈ ವಿಡಿಯೋ ವೈರಲ್ ಆಗಿದ್ದು ಅಸ್ಸಾಂ ಯುವತಿ ಮೇಲೆ ಬಾಂಗ್ಲಾ ಯುವಕರು ಅತ್ಯಾಚಾರ ನಡೆಸಿದ್ದಾರೆಂದು ವದಂತಿ ಹಬ್ಬಿತ್ತು. ಅಸ್ಸಾಂ ಪೊಲೀಸರು ವೀಡಿಯೋ ಕುರಿತು ತನಿಖೆ ನಡೆಸಿದಾಗ ಕೃತ್ಯದಲ್ಲಿ ಬಾಂಗ್ಲಾದೇಶದ ಪ್ರಜೆ ಗಳು ಭಾಗಿಯಾರುವುದು ತಿಳಿಯಿತು. ಬಾಂಗ್ಲಾದೇಶದಲ್ಲೂ ವೀಡಿಯೋ ವೈರಲ್‌ ಆಗಿದ್ದು, ಸಂತ್ರಸ್ತೆ ಬಗ್ಗೆ ಮಾಹಿತಿ ಸಂಗ್ರಹಿಸಿ ಆಕೆಯ ಕುಟುಂಬ ಸದಸ್ಯರನ್ನು ಪತ್ತೆ ಹಚ್ಚಿದ್ದರು. ಘಟನೆಯ ಬಗ್ಗೆ ಮಾಹಿತಿ ಪಡೆದ ಬೆಂಗಳೂರು ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಇದೀಗ ಎಲ್ಲಾ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪೊಲೀಸರಿಂದ ಗುಂಡೇಟು..
ಇನ್ನು ಆರೋಪಿಗಳನ್ನು ಮಹಜರಿಗೆ ಪೊಲೀಸರು ಕರೆದೊಯ್ಯುವ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ಪರಾರಿಯಾಗಲು ಯತ್ನಿಸಿದ ರುದಯ್ ಬಾಬು ಹಾಗೂ ಸಾಗರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆತ್ಮರಕ್ಷಣೆಗಾಗಿ ಇನ್ಸ್‌ಪೆಕ್ಟರ್ ಮಲ್ವಿನ್ ಹಾಗೂ ಸಬ್ ಇನ್ಸ್‌ಪೆಕ್ಟರ್ ಅರವಿಂದ್ ರಿಂದ ಫೈರಿಂಗ್ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್ ಉನ್ನತಾಧಿಕಾರಿಗಳು ಭೇಟಿ‌ನೀಡಿ‌ ಪರಿಶೀಲನೆ ನಡೆಸಿದ್ದಾರೆ.

Comments are closed.