
ಮಂಗಳೂರು : ವೆನ್ಲಾಕ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ಹಾಗೂ ಸುಧಾರಣಾ ಕ್ರಮಗಳ ಕುರಿತು ಶಾಸಕರಾದ ವೇದವ್ಯಾಸ್ ಕಾಮತ್ ಹಾಗೂ ಡಾ. ವೈ ಭರತ್ ಶೆಟ್ಟಿ ಅವರು ಸಭೆ ನಡೆಸಿದರು.
ಕೋವಿಡ್ ಸೋಂಕಿತರ ಆರೋಗ್ಯದ ಕುರಿತು ನಿಗಾ ವಹಿಸುತ್ತಿರುವ ಆರೋಗ್ಯ ಕಾರ್ಯಕರ್ತರು ಹಾಗೂ ಆಶಾ ಕಾರ್ಯಕರ್ತೆಯರು ತಮ್ಮ ಆರೋಗ್ಯದ ಕುರಿತು ಗಮನ ಹರಿಸಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು.
ಅಲ್ಪ ಪ್ರಮಾಣದಲ್ಲಿ ಕೋವಿಡ್ ಸೋಂಕಿನ ರೋಗ ಲಕ್ಷಣಗಳು ಕಂಡು ಬಂದರೆ ಪರೀಕ್ಷೆಗೊಳಪಡುವಂತೆ ಅವರಲ್ಲಿ ಮನವಿ ಮಾಡಿಕೊಳ್ಳಬೇಕು. ರೋಗ ಉಲ್ಬಣಗೊಂಡು ಪರಿಸ್ಥಿತಿ ಕೈ ಮೀರುವ ಹಂತದ ವರೆಗೂ ಕಾಯಬಾರದು. ಹಾಗೂ ಸೋಂಕಿತರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಶಾಸಕ ಡಾ. ವೈ ಭರತ್ ಶೆಟ್ಟಿ ಹೇಳಿದರು.
ಎಲ್ಲಾ ಕೋವಿಡ್ ಸೋಂಕಿತರ ಆರೈಕೆಗಾಗಿ ಜಿಲ್ಲೆಯಲ್ಲಿನ ಆರೋಗ್ಯ ಮೂಲ ಸೌಕರ್ಯವನ್ನು ಹೆಚ್ಚಿಸಿ, ಉತ್ತಮ ಗುಣ ಮಟ್ಟದ ಚಿಕಿತ್ಸೆಯನ್ನು ಒದಗಿಸುವ ಜೊತೆಗೆ ಕೋವಿಡ್ ಸೋಂಕು ಹರಡದಂತೆ ತಡೆಗಟ್ಟಲು ಇನ್ನಿತರ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಮುಖ್ಯಸಚೇತಕರಾದ ಸುಧೀರ್ ಶೆಟ್ಟಿ ಕಣ್ಣೂರು, ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕರು, ಜಿಲ್ಲಾ ವೈಧ್ಯಾಧಿಕಾರಿಗಳು, ಕೆ.ಎಂ.ಸಿ ಆಸ್ಪತ್ರೆಯ ಡೀನ್ ಡಾ. ಎಂ.ವಿ ಪ್ರಭು, ಡಾ. ಸುರೇಶ್ ಶೆಟ್ಟಿ, ಮೆಡಿಸಿನ್ ಪ್ರೊಫೆಸರ್ ಡಾ. ಮುರಳೀಧರ ಯೆಡಿಯಾಳ್, ಆರ್.ಎಂ.ಒ ಡಾ. ಸಲ್ಡಾನ, ಹಿರಿಯ ತಜ್ಞೆ ಡಾ. ಜೆಸಿಂತಾ ಡಿಸೋಜ, ಡಾ. ಶರತ್ ಬಾಬು ಮುಂತಾದವರು ಉಪಸ್ಥಿತರಿದ್ದರು.
Comments are closed.