ಕರಾವಳಿ

ಮಂಗಳೂರಿನಲ್ಲಿ ಭಾರೀ ಮಳೆ : ಪಂಪ್‌ವೆಲ್ ಸೇತುವೆಯಡಿಯಲ್ಲಿ ನೀರು ನುಗ್ಗಿ ವಾಹನ ಸವಾರರ ಪರದಾಟ

Pinterest LinkedIn Tumblr

ಮಂಗಳೂರು, ಮೇ 29 : ಮಂಗಳೂರು ಹಾಗೂ ಸುತ್ತ ಮುತ್ತ ಪ್ರದೇಶಗಳಲ್ಲಿ ಶನಿವಾರ ಮುಂಜಾನೆ ಭಾರೀ ಮಳೆಯಾಗಿದೆ. ನಿರಂತರವಾಗಿ ಸುರಿದ ಮಳೆಯಿಂದ ನಗರದ ಹಲವೆಡೆಗಳಲ್ಲಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ.

ಭಾರೀ ಮಳೆ ಸುರಿದ ಪರಿಣಾಮ ಪಂಪ್‌ವೆಲ್ ವೃತ್ತದ ಬಳಿ ನಿರ್ಮಿಸಲಾದ ಓವರ್ ಬ್ರಿಡ್ಜ್ ನ ಅಡಿಯಲ್ಲಿ ನೀರು ನುಗ್ಗಿದೆ. ಇಲ್ಲಿಯ ಸರ್ವೀಸ್ ರಸ್ತೆಯಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಯಿತು.

ನಗರದ ಕೊಟ್ಟಾರ ಚೌಕಿ ಸಮೀಪದ ರಾಜಕಾಲುವೆಗಳಲ್ಲಿಯೂ ನೀರು ಉಕ್ಕಿ ಹರಿದಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದೆ. ನಗರದ ಹೊರವಲಯದಲ್ಲೂ ಹಲವು ಕಡೆ ಭಾರೀ ಮಳೆಯಾಗಿದೆ. ಕೆಲವು ಕಡೆಗಳಲ್ಲಿ ಮಳೆಯಿಂದ ಹಾನಿ ಸಂಭವಿಸಿದೆ ಎಂದು ಹೇಳಲಾಗಿದೆ.

ಮಳೆಯು ಇನ್ನೆರಡು ದಿನಗಳ ಕಾಲ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮಾಹಿತಿ ನೀಡಿದೆ.

Comments are closed.