ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರದ ಕುಂದಬಾರಂದಾಡಿ ಎಂಬಲ್ಲಿ ರೈಲು ಡಿಕ್ಕಿಯಾಗಿ ಚಿರತೆಯೊಂದು ಮೃತಪಟ್ಟ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.

ಸೇನಾಪುರ ವ್ಯಾಪ್ತಿಯ ಕುಂದಬಾರಂದಾಡಿ ಎಂಬಲ್ಲಿ ಈ ಘಟನೆ ನಡೆದಿದ್ದು ರಾಜಧಾನಿ ಹೆಸರಿನ ರೈಲಿಗೆ ಚಿರತೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಚಿರತೆ ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದು ಮೂರು ವರ್ಷ ಪ್ರಾಯದ ಗಂಡು ಚಿರತೆ ಇದಾಗಿದೆ.
ಘಟನಾ ಸ್ಥಳಕ್ಕೆ ಕುಂದಾಪುರ ವಲಯ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದರು. ಮೃತ ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
Comments are closed.