ಕರಾವಳಿ

ಯಡಮೊಗೆ ಗ್ರಾಮಪಂಚಾಯತಿ ‌ಅಕ್ರಮಗಳ‌ ಬಗ್ಗೆ ಆಕ್ಷೇಪಿಸಿದ್ದಕ್ಕೆ ನಡೆಯಿತಾ ವ್ಯಕ್ತಿಯ ಕೊಲೆ..?

Pinterest LinkedIn Tumblr

ಕುಂದಾಪುರ: ಉಡುಪಿ ಜಿಲ್ಲೆಯ ಯಡಮೊಗೆ ಗ್ರಾಮಪಂಚಾಯತಿಯಲ್ಲಿ ನಡೆಯುತ್ತಿದೆ ಎನ್ನಲಾದ ಅಕ್ರಮಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಿಸಿ ಬರೆದ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ ಘಟನೆ ಕುಂದಾಪುರದ ಯಡಮೊಗೆ ಎಂಬಲ್ಲಿ ಶನಿವಾರ ರಾತ್ರಿ ಸಂಭವಿಸಿದೆ. ಯಡಮೊಗೆಯ ಹೊಸಬಾಳು ನಿವಾಸಿ ಉದಯ ಗಾಣಿಗ (45) ಕೊಲೆಯಾದ ವ್ಯಕ್ತಿ.

ಯಡಮೊಗೆ ಗ್ರಾ.ಪಂ. ಅಧ್ಯಕ್ಷ ಪ್ರಾಣೇಶ್‌ ಯಡಿಯಾಳ್‌ ವಿರುದ್ಧ ಉದಯ ಗಾಣಿಗ ಕುಟುಂಬಿಕರು ಕೊಲೆ ಆರೋಪ ಮಾಡಿದ್ದಾರೆ.

ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ತನ್ನ ಮನೆ ಎದುರು ರಸ್ತೆಯ ಮೇಲೆ ನಿಂತಿದ್ದ ಉದಯ ಗಾಣಿಗ ಅವರ ಮೇಲೆ ಪ್ರಾಣೇಶ್‌ ಯಡಿಯಾಳ ಏಕಾಏಕಿಯಾಗಿ ಕಾರು ಚಲಾಯಿಸಿದ್ದು ಉದಯ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ಅವರನ್ನು ಸ್ಥಳೀಯರು 108 ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯುವ ಯತ್ನ ಮಾಡಿದರಾದರೂ ಕೂಡ ಉದಯ್ ಅವರು ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ಯಡಮೊಗೆ ಗ್ರಾ.ಪಂ.ನಲ್ಲಿ ನಡೆಯುವ ಅನ್ಯಾಯ, ಅಕ್ರಮಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಉದಯ ಗಾಣಿಗ ಬರೆದಿದ್ದರು. ಮಾತ್ರವಲ್ಲ‌ ಇತ್ತೀಚಿನ ಗ್ರಾ.ಪಂ ಲಾಕ್ಡೌನ್ ಬಗ್ಗೆಯೂ ನಿಲುವು ಪ್ರಕಟಿಸಿ ಪಂಚಾಯತ್ ವಿರುದ್ಧ ಅಸಮಾಧಾನ ಹೊರಹಾಕಿದ್ದರು ಎನ್ನಲಾಗುತ್ತಿದ್ದು, ಇದರಿಂದಾಗಿಯೇ ಗ್ರಾ.ಪಂ. ಅಧ್ಯಕ್ಷ ಪ್ರಾಣೇಶ್‌ ಹಾಗೂ ಉದಯ ಮಧ್ಯೆ ಮನಸ್ತಾಪ ಉಂಟಾಗಿತ್ತೆನ್ನಲಾಗಿದೆ.

ಉದಯ್‌ ವಿವಾಹಿತರಾಗಿದ್ದು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Comments are closed.