ಕರ್ನಾಟಕ

ರೋಹಿಣಿ ಸಿಂಧೂರಿ, ಶಿಲ್ಪಾನಾಗ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

Pinterest LinkedIn Tumblr

ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮೈಸೂರು ನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಹಿಂದೂ ಮತ್ತು ಧಾರ್ಮಿಕ-ದತ್ತಿ ಇಲಾಖೆಗೆ ವರ್ಗಾವಣೆ ಮಾಡಲಾಗಿದ್ದು ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್‌ ಅವರನ್ನು ಗ್ರಾಮೀಣಾಭಿವೃದ್ದಿ ಇಲಾಖೆಯ ಇ ಆಡಳಿತದ ನಿರ್ದೇಶಕಿಯಾಗಿ ವರ್ಗಾಯಿಸಲಾಗಿದೆ. ಡಾ| ಬಗಾದಿ ಗೌತಮ್‌ ಅವರಿಗೆ ಮೈಸೂರು ಜಿಲ್ಲಾಧಿಕಾರಿ ಹೊಣೆ ಮತ್ತು ಲಕ್ಷ್ಮೀಕಾಂತ್‌ ರೆಡ್ಡಿ ಅವರನ್ನು ಪಾಲಿಕೆ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.

ಇತ್ತೀಚೆಗೆ ಮೈಸೂರಿನ ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಆಯುಕ್ತೆ ನಡುವಿನ ವೈಮನಸ್ಸು ಬಹಿರಂಗವಾಗಿತ್ತು. ಇಬ್ಬರು ಐಎಎಸ್ ಅಧಿಕಾರಿಗಳು ಪರಸ್ಪರ ಒಬ್ಬರಿಗೊಬ್ಬರು ಆರೋಪ ಪ್ರತ್ಯಾರೋಪಗಳನ್ನು ಮಾಡಿಕೊಂಡಿದ್ದು ಈ ನಡುವೆ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ರಾಜಿನಾಮೆಯನ್ನು ನೀಡಿದ್ದರು. ಈತನ್ಮದ್ಯೆ ಸರಕಾರ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

Comments are closed.