ಕರಾವಳಿ

ಕಂಪ್ಲೀಟ್ ಲಾಕ್ಡೌನ್ ಆದ 40 ಗ್ರಾ.ಪಂ.ನಲ್ಲಿ ಜೂ.7, 8ರಂದು ಬೆಳಿಗ್ಗೆ 6-10 ಗಂಟೆಯೊಳಗೆ ಅಗತ್ಯ ವಸ್ತು ಖರೀದಿಗೆ ಅವಕಾಶ: ಡಿಸಿ ಜಿ.ಜಗದೀಶ್

Pinterest LinkedIn Tumblr

ಉಡುಪಿ: ಕೋವಿಡ್ ಹರಡುವಿಕೆ, ಪಾಸಿಟಿವ್ ಪ್ರಕರಣ ಪ್ರಮಾಣವನ್ನು ತಗ್ಗಿಸುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದಲ್ಲಿ 50 ಕ್ಕೂ ಸಕ್ರಿಯ ಪ್ರಕರಣಗಳಿರುವ ಗ್ರಾಮ ಪಂಚಾಯತ್ ಗಳನ್ನು ಕಳೆದ ಬುಧವಾರದಿಂದ ಸೋಮವಾರ ಮುಂಜಾನೆವರೆಗೆ 5 ದಿನಗಳ ಕಾಲ ಕಂಪ್ಲೀಟ್ ಲಾಕ್ ಡೌನ್ ಮಾಡಲಾಗಿದ್ದು ಜೂ.7 ಸೋಮವಾರ ಹಾಗೂ ಜೂ.8 ಮಂಗಳವಾರದಂದು ಬೆಳಿಗ್ಗೆ 6 ರಿಂದ 10 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಮಾಡಿದ್ದಾರೆ.

(ಡಿಸಿ ಜಿ. ಜಗದೀಶ್- ಸಂಗ್ರಹ ಚಿತ್ರ)

ಈಗಾಗಲೇ ಜಿಲ್ಲೆಯ 40 ಗ್ರಾಮಪಂಚಾಯತಿಗಳನ್ನು ಕಂಪ್ಲೀಟ್ ಲಾಕ್ಡೌನ್ ಮಾಡಲಾಗಿದ್ದು ಎರಡು ದಿನ ನಿಗದಿತ ಅವಧಿಯಲ್ಲಿ ಆಹಾರ ಸಾಮಾಗ್ರಿಗಳನ್ನು ಹಾಗೂ ಅಗತ್ಯ ವಸ್ತುಗಳ ಖರೀದಿಸಲು ಅವಕಾಶ ನೀಡಲಾಗಿದೆ. ಈ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಲಾಕ್ಡೌನ್ ಮುಂದುವರೆಸುವ ಬಗ್ಗೆ ಜೂ.8 ರಂದು‌ ನಡೆಸುವ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಡಿಸಿ ತಿಳಿಸಿದ್ದಾರೆ.

ಯಾಕೆ ಲಾಕ್ಡೌನ್ ಮಾಡಲಾಗಿತ್ತು…?
ಕಳೆದ ವಾರ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಶಾಸಕರು ಸಂಸದರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಐವತ್ತಕ್ಕೂ ಅಧಿಕ ಸಕ್ರೀಯ ಪ್ರಕರಣಗಳಿರುವ ಗ್ರಾ.ಪಂ ವ್ಯಾಪ್ತಿಯನ್ನು ಕಂಪ್ಲೀಟ್ ಲಾಕ್ಡೌನ್ ಮಾಡಲು ಆದೇಶ ನೀಡಿದ್ದು ಈ ಸೂಚನೆ ಬೆನ್ನಲ್ಲೇ ಜಿಲ್ಲಾಡಳಿತವು ಜಿಲ್ಲೆಯಲ್ಲಿ ಈವರೆಗೆ 40 ಗ್ರಾಮ ಪಂಚಾಯತ್ ಗಳಲ್ಲಿ ಕಂಪ್ಲೀಟ್ ಲಾಕ್ಡೌನ್ ಆದೇಶಿಸಿದೆ.

ಈವರೆಗೆ ಸಂಪೂರ್ಣ ಲಾಕ್ಡೌನ್ ಆದ ಗ್ರಾ.ಪಂ….
ಶಿರೂರು, ಜಡ್ಕಲ್, ಕಂಬದಕೋಣೆ, ನಾಡ, ಕಾವ್ರಾಡಿ, ಹೊಂಬಾಡಿ ಮಂಡಾಡಿ, ಕೋಟೇಶ್ವರ, ಹಾಲಾಡಿ, ಇಡೂರು ಕುಂಜ್ಞಾಡಿ, ಆಜ್ರಿ, ಆಲೂರು, 38 ಕಳತ್ತೂರು, 80 ಬಡಗಬೆಟ್ಟು, ಅಲೆವೂರು, ಪೆರ್ಡೂರು, ತೆಂಕನಿಡಿಯೂರು, ಬೊಮ್ಮರಬೆಟ್ಟು, ಬೆಳಪು, ಬೆಳ್ಳೆ, ಪಡುಬಿದ್ರಿ, ಶಿರ್ವ, ಮಾಳ, ಈದು, ಕುಕ್ಕುಂದೂರು, ಕಡ್ತಲ, ಮರ್ಣೆ, ಪಳ್ಳಿ, ನಿಟ್ಟೆ, ಮಿಯಾರು, ಬೆಳ್ಮಣ್, ಬೆಳ್ವೆ, ಮುದ್ರಾಡಿ, ವರಂಗ, ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ, ಆವರ್ಸೆ, ಹನೆಹಳ್ಳಿ, ಕುಂದಾಪುರ ತಾಲೂಕಿನ ತಲ್ಲೂರು, ಕರ್ಕುಂಜೆ, ಯಡಮೊಗೆ ಹಾಗೂ ಕಾರ್ಕಳದ ಕಲ್ಯ.

(ವರದಿ- ಯೋಗೀಶ್ ಕುಂಭಾಸಿ)

Comments are closed.