ಕರಾವಳಿ

ಜನರ ಸಂಕಷ್ಟವನ್ನರಿತು 2ನೇ ಹಂತದ ಪ್ಯಾಕೇಜ್ ಘೋಷಿಸಿದ ಮುಖ್ಯಮಂತ್ರಿಗಳಿಗೆ ಅಭಿನಂದನೆ : ಶಾಸಕ ಕಾಮತ್

Pinterest LinkedIn Tumblr

ಮಂಗಳೂರು : ಲಾಕ್ ಡೌನ್ ಮುಂದವರಿಸಿದ ಸಂದರ್ಭದಲ್ಲಿ 2ನೇ ಹಂತದ 500 ಕೋಟಿ ಪ್ಯಾಕೇಜ್ ಘೋಷಿಸಿರುವ‌ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, ಕೋವಿಡ್ ನಿಯಂತ್ರಣಕ್ಕಾಗಿ ಲಾಕ್ ಡೌನ್ ವಿಸ್ತರಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜನರ ಸಂಕಷ್ಟವನ್ನರಿತು 2ನೇ ಹಂತದಲ್ಲಿ 500 ಕೋಟಿ ರೂಪಾಯಿ ಪ್ಯಾಕೇಜ್ ಘೋಷಿಸಿದ್ದಾರೆ.

ಅನುದಾನ ರಹಿತ ಶಾಲೆಗಳ ಶಿಕ್ಷಕರಿಗೆ ತಲಾ 5 ಸಾವಿರ, ಕೋವಿಡ್ ಮುಂಚೂಣಿ ಯೋಧರಾಗಿರುವ ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕರಿಗೆ ತಲಾ 2 ಸಾವಿರ, ಕೇಂದ್ರ ಸರಕಾರದ ಉಳಿತಾಯ ಮತ್ತು ಪರಿಹಾರ ಯೋಜನೆಯಡಿ ನೋಂದಾಯಿಸಿರುವ 18,746 ಮೀನುಗಾರರಿಗೆ ತಲಾ 3000 ರೂಪಾಯಿ ಪರಿಹಾರ, ಒಳನಾಡು ದೋಣಿ ಮಾಲಕರಿಗೆ ತಲಾ 3 ಸಾವಿರ ಸಹಾಯ ಧನ ಸೇರಿದಂತೆ ಇತರೆ ವರ್ಗಗಳಿಗೂ ಘೋಷಿಸಿರುವ‌ ಪ್ಯಾಕೇಜ್ ಜನರಿಗೆ ಉಪಯೋಗವಾಗಲಿದೆ.

ಅದಕ್ಕಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಶಾಸಕ ಕಾಮತ್ ಹೇಳಿದ್ದಾರೆ.

Comments are closed.