
ಮಂಗಳೂರು, ಜೂನ್ 08 : ಬಂಟ್ವಾಳ ತಾಲೂಕಿನ ಬಾಳೆಪುಣಿ ಗ್ರಾಮದ ಕುಕ್ಕದ ಕಟ್ಟೆ ಸೈಟ್ ಮನೆಯ ನಿವಾಸಿಯಾದ ದೀಕ್ಷಿತಾ ಎಂಬುವರು ಜೂನ್ 6 ರಂದು ಕಾಣೆಯಾಗಿದ್ದಾರೆ.
ಕಾಣೆಯಾದ ಯುವತಿಗೆ 18 ವರ್ಷ ವಯಸ್ಸಾಗಿದ್ದು, ದುಂಡು ಮುಖ, ಗೋಧಿ ಬಣ್ಣ ಸಾಧಾರಣಾ ಮೈಕಟ್ಟು ಹೊಂದಿದ್ದಾರೆ. ಕಾಣೆಯಾದ ಸಮಯದಲ್ಲಿ ಕಪ್ಪು ಬಣ್ಣದ ಪ್ಯಾಂಟ್, ಬಿಳಿ ಬಣ್ಣದ ಚೂಡಿದಾರ್ ಟಾಪ್ ಧರಿಸಿರುತ್ತಾರೆ. ಕನ್ನಡ, ಮಲಯಾಳಂ, ತುಳು ಹಾಗೂ ಇಂಗ್ಲೀಷ್ ಭಾಷೆಗಳನ್ನು ಮಾತನಾಡುತ್ತಾರೆ.
ಈ ಚಹರೆಯುಳ್ಳ ಯುವತಿಯ ಪತ್ತೆಯಾದಲ್ಲಿ ಮಂಗಳೂರು ನಗರ ನಿಯಂತ್ರಣ ಕೊಠಡಿ ಅಥವಾ ಕೊಣಾಜೆ ಪೊಲೀಸ್ ಠಾಣೆ ದೂ. ಸಂಖ್ಯೆ: 0824-2220536, 9480802350 ಹಾಗೂ 0824-2220800 ಗೆ ಸಂಪರ್ಕಿಸಬಹುದು ಎಂದು ಕೊಣಾಜೆ ಪೊಲೀಸ್ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಾಗಿ ಮೊಬೈಲಿನಲ್ಲಿ ಮಾತನಾಡುತ್ತಿದ್ದದ್ದೇ ನಾಪತ್ತೆಗೆ ಕಾರಣವಾಯಿತೇ?
ಯುವತಿ ಹೆಚ್ಚಾಗಿ ಮೊಬೈಲಿನಲ್ಲಿ ಮಾತನಾಡುತ್ತಿರುವುದನ್ನು ತಾಯಿ ಪ್ರಶ್ನಿಸಿದಕ್ಕೆ ಮನೆ ಬಿಟ್ಟು ನಾಪತ್ತೆಯಾಗಿದ್ದಾಳೆ ಎಂದು ಹೇಳಲಾಗಿದೆ.
ಜು.6 ರಂದು ಯುವತಿಯ ತಾಯಿ ಮೀನಾಕ್ಷಿ ಅವರು ಮುಡಿಪು ಪೇಟೆಗೆ ಮಗನ ಜೊತೆಗೆ ಬೆಳಿಗ್ಗೆ 7.30 ರ ಸುಮಾರಿಗೆ ತೆರಳಿದ್ದರು. ಈ ವೇಳೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳೆಪುಣಿ ಗ್ರಾಮದ ಕುಕ್ಕುದಕಟ್ಟೆ ಸೈಟ್ ನಲ್ಲಿದ್ದ ಕುಮಾರಿ ದೀಕ್ಷಾ (18) ಒಬ್ಬಳೇ ಮನೆಯಲ್ಲಿದ್ದವಳು ನಾಪತ್ತೆಯಾಗಿದ್ದಾಳೆ ಎಂದು ತಾಯಿ ಮೀನಾಕ್ಷಿ ಕೊಣಾಜೆ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ.
ದೀಕ್ಷಾ ಹೆಚ್ಚಾಗಿ ಮೊಬೈಲಿನಲ್ಲಿ ಮಾತನಾಡುತ್ತಿದ್ದುದನ್ನು ತಾಯಿ ಪ್ರಶ್ನಿಸಿದ್ದರು. ಇದೇ ಕಾರಣವನ್ನು ಮುಂದಿಟ್ಟುಕೊಂಡು ಬಾಲಕಿ ನಾಪತ್ತೆಯಾಗಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
Comments are closed.