
ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 2 ದಿನಗಳ ಕಾಲ ಮಳೆ ಸಾಧ್ಯತೆಯಿದೆ. ಮಾತ್ರವಲ್ಲದೇ ರಾಜ್ಯದಲ್ಲಿ ಮುಂದಿನ ವಾರ ಕೂಡ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಜೂನ್ 14 ಸೋಮವಾರದಂದು 20 ಸೆಂ.ಮೀ ಗೂ ಅಧಿಕ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಹಾಗೂ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಮಾನ್ಸೂನ್ ದುರ್ಬಲವಾಗಿದ್ದು, ವಾಯುಭಾರ ಕುಸಿತ ಉಂಟಾಗಿದೆ. ಹಾಗಾಗಿ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಆಗಲಿದೆ. ಇನ್ನು ಉತ್ತರ ಒಳನಾಡಿನಲ್ಲಿ ಕೆಲವಡೆ ಸಾಧಾರಣ ಮಳೆಯಾಗಲಿದೆ.
ಭಾನುವಾರದಿಂದ ಮಳೆಗಾಲ ಮಳೆ ತೀವ್ರಗೊಳ್ಳಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಜೂನ್ 13 ಹಾಗೂ 14 ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬಳ್ಳಾರಿ ಹಾಗೂ ಚಿತ್ರದುರ್ಗಕ್ಕೂ ಜೂನ್ 13, 14 ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.
ಇನ್ನು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಜೂನ್ 13, 14 ರಂದು ಆರೆಂಜ್ ಅಲರ್ಟ್ ಘೊಷಣೆ ಮಾಡಲಾಗಿದೆ.
ಇನ್ನು ಜೂನ್ 12ರಿಂದ ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಭಾಗದಲ್ಲಿ ಇಂದಿನಿಂದ ಜೂನ್ 12ರವರೆಗೆ ಮಳೆ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.
Comments are closed.