ಕರಾವಳಿ

ಅನಗ್ಗತ್ಯ ಸಂಚಾರ, ಅನುಮತಿ ಇಲ್ಲದ ಅಂಗಡಿಗಳಲ್ಲಿ ವ್ಯಾಪಾರ : ರೂ.76400 ದಂಡ ವಿಧಿಸಿದ ಮನಪಾ ಅಧಿಕಾರಿಗಳು

Pinterest LinkedIn Tumblr

ಮಂಗಳೂರು : ಕೋವಿಡ್-19 ಸಾಂಕ್ರಾಮಿಕ ಸೋಂಕಿನ ಹರಡುವಿಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ಮಾರ್ಗಸೂಚಿಗಳನ್ವಯ ಬೆಳ್ಳಗೆ 6 ರಿಂದ 10 ಗಂಟೆಯವೆರೆಗೆ ದಿನ ನಿತ್ಯದ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶವನ್ನು ಕಲ್ಪಿಸಲಾಗಿದೆ.

ಆದರೆ ಕೆಲವು ಸಂದರ್ಭಗಳಲ್ಲಿ ಅನುಮತಿಸದೆ ಇರುವ ವಸ್ತುಗಳ ಅಂಗಡಿಗಳನ್ನು ಅನಧಿಕೃತವಾಗಿ ತೆರೆದು ವ್ಯಾಪಾರ ವಹಿವಾಟುಗಳನ್ನು ನಡೆಸುತ್ತಿರುವುದು ಗಮನಕ್ಕೆ ಬಂದಿರುತ್ತದೆ.

ಈ ಹಿನ್ನಲೆಯಲ್ಲಿ ಪಾಲಿಕೆಯಿಂದ ವಿವಿಧ ತಂಡಗಳ ಮೂಲಕ ನಡೆಸಲಾದ ಕಾರ್ಯಾಚರಣೆಯ ವೇಳೆ ಕೋವಿಡ್ 19 ಮಾರ್ಗಸೂಚಿ ಉಲ್ಲಂಘಿಸಿ ವ್ಯಾಪಾರ ವಹಿವಾಟು ನಡೆಸುತ್ತಿದ 78 ಅಂಗಡಿಗಳಿಗೆ ರೂ. 68,350/- ದಂಡನೆಯನ್ನು ವಿಧಿಸಿ ಈ ಪೈಕಿ 30 ಅಂಗಡಿಗಳ ಉದ್ದಿಮೆ ಪರವಾನಿಗೆಯನ್ನು ರದ್ದುಗೊಳಿಸಿ ತಾತ್ಕಾಲಿಕವಾಗಿ ಮುಂದಿನ ಆದೇಶದ ವರೆಗೆ ಮುಚ್ಚಲಾಗಿದೆ.

ಹಾಗೂ ಮುಂದುವರೆದು ಪೂರ್ವಾಹ್ನ 10.00 ಗಂಟೆಯ ಅವಧಿ ಮೀರಿ ಕೋವಿಡ್ 19 ಮಾರ್ಗಸೂಚಿಯನ್ನು ಉಲ್ಲಂಘಿಸಿ ಸಾರ್ವಜನಿಕರು ಅನಗತ್ಯ ಸಂಚರಿಸುತ್ತಿರುವವರನ್ನು ರ್‍ಯಾಂಡಮ್ ಆಗಿ ತಪಾಸಣೆ ನಡೆಸಿದಾಗ ಅನಗತ್ಯ ಓಡಾಟ ಮಾಡಿದ 19 ಪ್ರಕರಣಗಳಿಗೆ ರೂ. 8050/- ದಂಡವನ್ನು ವಿಧಿಸಿ ಎಚ್ಚರಿಕೆ ನೀಡಲಾಗಿದೆ ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತರು ಮಾಧ್ಯಮಕ್ಕೆ ತಿಳಿಸಿದ್ದಾರೆ.

Comments are closed.