ಕರಾವಳಿ

ಲಾಕ್ ಡೌನ್ ವಿಸ್ತರಣೆ : ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ 8 ಜಿಲ್ಲೆಗಳು ಮತ್ತೆ ಒಂದು ವಾರ ಲಾಕ್

Pinterest LinkedIn Tumblr

ಮಂಗಳೂರು, ಜೂನ್.10: ದ.ಕ.ಜಿಲ್ಲೆಯಲ್ಲಿ ಜೂ.21ರವರೆಗೆ ಲಾಕ್ ಡೌನ್ ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಿದ್ದಾರೆ.

ಕೊರೊನಾ ಸೋಂಕು ಪ್ರಮಾಣ ಶೇ.10ಕ್ಕಿಂತ ಕಡಿಮೆ ಬಾರದ ರಾಜ್ಯದ 8 ಜಿಲ್ಲೆಗಳಲ್ಲಿ ಜೂನ್ 21ರವರೆಗೆ ಲಾಕ್ ಡೌನ್ ಮುಂದುವರಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿರ್ಧರಿಸಿದ್ದು, ಸಂಜೆ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ.

ಗುರುವಾರ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವೀಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದ್ದು, ಬಹುತೇಕರ ಅಭಿಪ್ರಾಯದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ 8 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರಿಸಲು ತೀರ್ಮಾನಿಸಲಾಯಿತು. ಅಲ್ಲದೇ ವಿನಾಯಿತಿ ನೀಡುವ ಕುರಿತು ನಿರ್ಧಾರ ಕೈಗೊಳ್ಳಲು ಜಿಲ್ಲಾಧಿಕಾರಿಗಳ ವಿವೇಚನೆಗೆ ಬಿಡಲಾಯಿತು.

8 ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಧಿಕಾರಿಗಳು ಲಾಕ್ ಡೌನ್ ಅನ್ನು ವಿಸ್ತರಿಸುವಂತೆ ಒತ್ತಾಯಿಸಿದ ನಂತರ, ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರು ಜೂ.14ರ ಬಳಿಕವೂ ಲಾಕ್ ಡೌನ್ ಅನ್ನು ಮತ್ತೆ ಒಂದು ವಾರಗಳ ಕಾಲ ವಿಸ್ತರಿಸುವ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ದಕ್ಷಿಣ ಕನ್ನಡ, ಮಂಡ್ಯ, ಬೆಳಗಾವಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ತುಮಕೂರು, ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಲಾಕ್‌ಡೌನ್ ಅನ್ನು ಒಂದು ವಾರ ಮುಂದುವರಿಸಲು ತೀರ್ಮಾನಿಸಲಾಗಿದೆ. ಇದಲ್ಲದೆ ಇತರ ಜಿಲ್ಲೆಗಳಲ್ಲಿ ಕೊವೀಡ್ ಪರಿಸ್ಥಿತಿ ಅವಲೋಕಿಸಿ ಲಾಕ್ ಡೌನ್ ಸಡಿಲಗೊಳಿಸುವಂತೆ ಜಿಲ್ಲಾಧಿಕಾರಿ ಮತ್ತು ಉಸ್ತುವಾರಿ ಸಚಿವರಿಗೆ ಸೂಚಿಸಿದ್ದಾರೆ. ಇದೇ ವೇಳೆ ಟೆಸ್ಟಿಂಗ್ ಪ್ರಮಾಣ ಹೆಚ್ಚಿಸಲು ಸಿಎಂ ಸೂಚಿಸಿದ್ದಾರೆ.

Comments are closed.