ಕರಾವಳಿ

ಪ್ಲ್ಯಾಟ್ ಓನರ್ಸ್ ಅಸೋಸಿಯೇಷನ್ ಹಾಗೂ ವಸತಿ ಸಮುಚ್ಚಯದ ನಿವಾಸಿಗಳಿಗೆ ಮನವಿ

Pinterest LinkedIn Tumblr

ಮಂಗಳೂರು, ಜೂನ್ 11 : ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ 19 ಪಾಸಿಟಿವ್ ಪ್ರಕರಣಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪ್ರಸ್ತುತ ಇರುವ ಕೋವಿಡ್ ಪರೀಕ್ಷೆಯನ್ನು ವ್ಯಾಪಕವಾಗಿ ಹೆಚ್ಚಿಸಿಕೊಂಡು ಪಾಸಿಟಿವ್ ಪ್ರಮಾಣವನ್ನು ಕಡಿಮೆಗೊಳಿಸುವುದು ಅನಿವಾರ್ಯವಾಗಿರುತ್ತದೆ.

ಪ್ರಸ್ತುತ ಮಂಗಳೂರು ಮಹಾಗರಪಾಲಿಕೆ ವ್ಯಾಪ್ತಿಯೊಳಗೆ ಶೇ. 17 ರಷ್ಟು ಕೋವಿಡ್ ಸೋಂಕಿತರ ಪ್ರಮಾಣ ವರದಿಯಾಗುತ್ತಿದ್ದು, ಈ ಸೋಂಕಿತ ಪ್ರಕರಣಗಳನ್ನು ಗಣನೀಯವಾಗಿ ತಗ್ಗಿಸಲು ಕೋವಿಡ್ ಪರೀಕ್ಷೆ ಪ್ರಮಾಣವನ್ನು ವ್ಯಾಪಕವಾಗಿ ಹೆಚ್ಚಿಸಲು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪ್ರಾಥಮಿಕ ಸಂಪರ್ಕಿತರನ್ನು ಪರೀಕ್ಷೆಗೆ ಒಳಪಡಿಸುವುದು ಅನಿವಾರ್ಯವಾಗಿದೆ.

ಈ ಹಿನ್ನಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಮಾಣವನ್ನು ತಗ್ಗಿಸಬೇಕಾದ ನಿಟ್ಟಿನಲ್ಲಿ ಇನ್ನು ಮುಂದಕ್ಕೆ ಪಾಲಿಕೆ ವ್ಯಾಪ್ತಿಯ ವಸತಿ ಸಮುಚ್ಚಯದಲ್ಲಿ ಯಾವುದೇ ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾದಲ್ಲಿ ಸಮುಚ್ಚಯದ ಎಲ್ಲಾ ನಿವಾಸಿಗಳನ್ನು ಪ್ರಾಥಮಿಕ ಸಂಪರ್ಕವೆಂದು ಪರಿಗಣಿಸಿ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗುವುದು. ಆದುದರಿಂದ ಪ್ಲ್ಯಾಟ್ ಓನರ್ಸ್ ಅಸೋಸಿಯೇಷನ್ ಮತ್ತು ವಸತಿ ಸಮುಚ್ಚಯದ ಎಲ್ಲಾ ನಿವಾಸಿಗಳ ಸಂಪೂರ್ಣ ಸಹಕಾರವನ್ನು ಈ ಮೂಲಕ ಕೋರಲಾಗಿದೆ ಎಂದು ಪಾಲಿಕೆ ಪ್ರಕಟಣೆ ತಿಳಿಸಿದೆ.

Comments are closed.