ಕರಾವಳಿ

ದಲಿತ ಕವಿ ಎಂದೇ ಪ್ರಖ್ಯಾತರಾಗಿದ್ದ ಖ್ಯಾತ ಕವಿ, ಸಾಹಿತಿ ನಾಡೋಜ ಡಾ.ಸಿದ್ದಲಿಂಗಯ್ಯ ಇನ್ನು ನೆನಪು ಮಾತ್ರ

Pinterest LinkedIn Tumblr

ಬೆಂಗಳೂರು, ಜೂನ್ 11: ಕೊರೊನಾ ಸೋಂಕಿನಿಂದಾಗಿ ನಗರದ ಖಾಸಗಿ ಆಸ್ಪತ್ರೆ ಸೇರಿದ್ದ ʼಖ್ಯಾತ ಕವಿ, ಸಾಹಿತಿ ನಾಡೋಜ ಡಾ.ಸಿದ್ದಲಿಂಗಯ್ಯ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟಿದ್ದಾರೆ.

66 ವರ್ಷದ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ದಲಿತ ಕವಿ ಎಂದೇ ಪ್ರಖ್ಯಾತರಾಗಿದ್ದ ಅವರು, ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ಸೃಷ್ಟಿಸಿದ್ದರು. 1988-1994 ಮತ್‌ಎತು 1995-2001ರವರೆಗೆ ಬಾರಿ ವಿಧಾನಪರಿಷತ್ ಸದಸ್ಯರಾಗಿಯೂ ಡಾ.ಸಿದ್ದಲಿಂಗಯ್ಯ ಕಾರ್ಯನಿರ್ವಹಿಸಿದ್ದರು.

ದಲಿತ ಚಳವಳಿಗೆ ಹೊಸ ವೇಗ, ಹೊಸ ಸ್ಪರ್ಶ ಕೊಟ್ಟವರು ಡಾ.ಸಿದ್ದಲಿಂಗಯ್ಯ. ಸಿದ್ದಲಿಂಗಯ್ಯ ಬರೆದ ಕ್ರಾಂತಿಗೀತೆ ‘ದಲಿತರು ಬರುವರು ದಾರಿ ಬಿಡಿ, ದಲಿತರ ಕೈಗೆ ರಾಜ್ಯ ಕೊಡಿ’ ರಾಜ್ಯವ್ಯಾಪಿ ಜನಪ್ರಿಯವಾಗಿತ್ತು. ದಲಿತ ಸಂವೇದನೆಗಳನ್ನು ಸಶಕ್ತವಾಗಿ, ಆಕ್ರೋಶವನ್ನು ಅಕ್ಷರಗಳಾಗಿ ಸಾರಿ ಹೇಳಿದ ಗೀತೆಯಿದು.

ಕ್ರಾಂತಿಗೀತೆ, ನೊಂದವರ ಪಾಡುಗಳನ್ನೇ ಹಾಡಾಗಿಸುತ್ತಿದ್ದ ಈ ಕವಿಯು ಶೃಂಗಾರ ಗೀತೆಗಳನ್ನು ಬರೆಯಬಲ್ಲರು ಎಂದು ನಿರೂಪಿಸಿದ್ದು ಜನಪ್ರಿಯ ಗೀತೆ ‘ಆ ಬೆಟ್ಟದಲ್ಲಿ ಬೆಳದಿಂಗಳಲ್ಲಿ ಸುಳಿದಾಡಬೇಡ ಗೆಳತಿ’ .ಕರ್ನಾಟಕದ ದಲಿತ ಚಳವಳಿಗೆ ಹೋಗ, ಸಂಚಲನ ನೀಡಿದ್ದ ಕ್ರಾಂತಿಗೀತೆ ಕ್ರಾಂತಿ ಗೀತೆ ‘ದಲಿತರು ಬಂದರು ದಾರಿ ಬಿಡಿ’.

1953ರಲ್ಲಿ ರಾಮನಗರ ಜಿಲ್ಲೆಯ ಮಾಗಡಿಯಲ್ಲಿ ಜನಿಸಿದ್ದ ಅವರು, ಬೆಂಗಳೂರಿನ ಸರ್ಕಾರಿ ಕಲಾ ಕಾಲೇಜಿನಲ್ಲಿ ಬಿ.ಎ ಆನರ್ಸ್ ಐಚ್ಛಿಕ ಕನ್ನಡ ಪದವಿ ಪಡೆದಿದ್ದರು. ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂ.ಎ ಪದವಿ ಪಡೆದ ಅವರು ‘ಗ್ರಾಮದೇವತೆಗಳು’ ಎಂಬ ಪ್ರೌಢ ಪ್ರಬಂಧಕ್ಕೆ 1989ರಲ್ಲಿ ಡಾಕ್ಟರೇಟ್ ಪದವಿ ಪಡೆದಿದ್ದರು.

ಬಡವರ ಮನೆಗೆ ಬರಲಿಲ್ಲ, ಬೆಳಕಿನ ಕಿರಣ ತರಲಿಲ್ಲ, ಗೋಳಿನ ಕಡಲನ್ನು ಬತ್ತಿಸಲಿಲ್ಲ ಈ 47ರ ಸ್ವಾತಂತ್ರ್ಯ’ ಎನ್ನುತ್ತ ಸೋತ ರಟ್ಟಿಗಳ, ಹೂತ ಕಾಲುಗಳ ಬೆವರು ಹಸಿರು ಕವನ ನನ್ನ ಜನರ ನಾ ನೋಡಿದ ರೀತಿ ನನ್ನ ಒಡಲ ಕವನ’ ಎಂದು ತನ್ನ ಹಾಡು ಹಾಗೂ ಕವನಗಳ ಮೂಲಕ ಶೋಷಿತ ವರ್ಗದ ಜನರಲ್ಲಿ ಬಂಡಾಯ ಕಿಚ್ಚು ಹಚ್ಚಿಸುತ್ತಿದ್ದ ನಾಡೋಜ ಡಾ ಸಿದ್ಧಲಿಂಗಯ್ಯ ಇನ್ನು ನೆನೆಪು ಮಾತ್ರ.

‘ಇಕ್ರಲಾ ಒದಿರ್ಲಾ ಈ ನನ್ಮಕ್ಳನ್ನ’ ಎನ್ನುತ್ತಾ ಶೋಷಿತ ವರ್ಗಕ್ಕೆ ಧ್ವನಿಯಾಗಿದ್ದ, ಈ ನಾಡಿನ ಸಾಕ್ಷಿ ಪ್ರಜ್ಞೆ ಸಿದ್ದಲಿಂಗಯ್ಯನವರು ಮಹಾಮಾರಿ ಕೋವಿಡ್ ಸೋಂಕಿನಿಂದ ಇಂದು ‘ಊರು ಕೇರಿ’ ತೊರೆದು ಬಾರದ ಲೋಕಕ್ಕೆ ಪಯಣಿಸಿದ್ದಾರೆ.

‘ಹೊಲೆಮಾದಿಗರ ಹಾಡು’, ‘ಮೆರವಣಿಗೆ’, ‘ಸಾವಿರಾರು ನದಿಗಳು’, ‘ಕಪ್ಪು ಕಾಡಿನ ಹಾಡು’, ‘ನನ್ನ ಜನಗಳು’ ಸೇರಿದಂತೆ ಹಲವು ಕವನ ಸಂಕಲಗಳನ್ನು ಸಿದ್ದಲಿಂಗಯ್ಯ ಅವರು ಹೊರತಂದಿದ್ದಾರೆ. ‘ಊರು-ಕೇರಿ’ ಎಂಬ ಆತ್ಮಕಥನವನ್ನು ಅವರು ರಚಿಸಿದ್ದಾರೆ. ಪಂಪ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ನಾಡೋಜ, ನೃಪತುಂಗ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ ಹಾಗೂ ಗೌರವಗಳು ಅವರಿಗೆ ದೊರೆತಿವೆ.

‘ದಲಿತ ಕವಿ’ ಎಂದೇ ಪ್ರಸಿದ್ಧರಾದ ಸಿದ್ಧಲಿಂಗಯ್ಯನವರು ದಲಿತ ಹೋರಾಟ ಮತ್ತು ಸಾಮಾಜಿಕ ಸಮಾನತೆಗಾಗಿ ಕಾವ್ಯ ಸಾಹಿತ್ಯಗಳನ್ನು ರಚಿಸಿದವರು. ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದವರು. ಎರಡು ಬಾರಿ ವಿಧಾನಪರಿಷತ್ತಿನ ಸದಸ್ಯರಾಗಿದ್ದರು. ಅಧ್ಯಾಪನ-ಬರವಣಿಗೆಗಳಲ್ಲಿ ತೊಡಗಿಕೊಂಡಿದ್ದರು.

1954ರಲ್ಲಿ ಮಾಗಡಿ’ ತಾಲ್ಲೂಕಿನ ‘ಮಂಚನಬೆಲೆ’ ಗ್ರಾಮದಲ್ಲಿ ಜನಿಸಿದ ಸಿದ್ದಲಿಂಗಯ್ಯ ಅವರು ಅಧ್ಯಾಪಕರಾಗಿ ವೃತ್ತಿ ಆರಂಭಿಸಿದ್ದರು. ತಂದೆ ದೇವಯ್ಯ, ತಾಯಿ ಶ್ರೀಮತಿ ವೆಂಕಮ್ಮ. ಮಲ್ಲೇಶ್ವರಂನ ಸರ್ಕಾರಿ ಪ್ರೌಢಶಾಲೆ ಇವರ ವಿದ್ಯಾಕೇಂದ್ರವಾಗಿತ್ತು. ಆ ವೇಳೆಗಾಗಲೇ ಕವಿತೆ ಬರೆವ ಅಭ್ಯಾಸ ಇವರಿಗಿತ್ತು. ವಿದ್ಯಾರ್ಥಿ ದೆಸೆಯಲ್ಲಿಯೇ ಇವರು ಉತ್ತಮ ಭಾಷಣಕಾರರಾಗಿದ್ದರು. ಅಂಬೇಡ್ಕರ್, ಪೆರಿಯಾರ್, ವಸುದೇವಭೂಪಾಲ, ಲೋಹಿಯಾ ಮುಂತಾದವರ ವಿಚಾರಧಾರೆಗಳಿಂದ ಆಕರ್ಷಿತರಾಗಿದ್ದರು.

ಪ್ರಾಧ್ಯಾಪಕ, ಕವಿ, ಹೋರಾಟಗಾರ, ಅಧ್ಯಕ್ಷರು(ಕನ್ನಡ ಪುಸ್ತಕ ಪ್ರಾಧಿಕಾರ) ಅಧ್ಯಕ್ಷರು (ಕನ್ನಡ ಅಭಿವೃದ್ಧಿ ಪ್ರಾಧಿಕಾರ) Executive Board Members-ಕೇಂದ್ರ ಸಾಹಿತ್ಯ ಅಕಾಡೆಮಿಯಲ್ಲೂ ಕೂಡ ಕಾರ್ಯನಿರ್ವಹಿಸಿದ್ದರು.

ಡಾ.ಸಿದ್ದಲಿಂಗಯ್ಯ ಅವರ ಹೆಸರನ್ನು ಉಲ್ಲೇಖಿಸದೇ ಬಂಡಾಯ ಸಾಹಿತ್ಯದ ಇತಿಹಾಸ ಬರೆಯಲು ಸಾಧ್ಯವಿಲ್ಲ ಎಂಬಂತೆ ಅವರು ಹೆಸರುವಾಸಿಯಾಗಿದ್ದರು. ಪಂಪ, ನಾಡೋಜ ಪ್ರಶಸ್ತಿಗಳಿಗೂ ಭಾಜನರಾಗಿದ್ದ ಅವರು, ದಲಿತ, ಬಂಡಾಯವೆಂದರೆ ಹೊಡಿ- ಬಡಿ ಎಂಬುದಲ್ಲ ಎಂದು ವ್ಯಾಖ್ಯಾನಿಸಿದ್ದರು.

ದಲಿತರು ಬರುವರು ದಾರಿಬಿಡಿ, ದಲಿತರ ಕೈಗೆ ರಾಜ್ಯಕೊಡಿ ಎಂಬ ಅವರ ಕ್ರಾಂತಿಗೀತೆ ಈಗಲೂ ದಲಿತ ಚಳವಳಿಗಳಲ್ಲಿ ಕೇಳಿಬರುವಂತಹದ್ದು. ಹೊಲೆ ಮಾದಿಗರ ಹಾಡು, ಸಾವಿರಾರು ನದಿಗಳು, ಮೆರವಣಿಗೆ, ಕಪ್ಪು ಕಾಡಿನ ಹಾಡು, ನನ್ನ ಜನಗಳು ಮತ್ತು ಇತರೆ ಕವಿತೆಗಳು ಅವರ ಪ್ರಮುಖ ಕವಿತಾ ಸಂಕಲನಗಳು. ಸದನದಲ್ಲಿ ಸಿದ್ದಲಿಂಗಯ್ಯ ಭಾಗ 1 ಮತ್ತು ಭಾಗ 2 ಅವರು ವಿಧಾನಪರಿಷತ್ ಸದಸ್ಯರಾಗಿ ಕರ್ತವ್ಯನಿರ್ವಹಿಸಿದ ಅನುಭವಗಳ ನೈಜ ಅನುಭವ ಕಥನ. ಅವರ ಆತ್ಮಕಥೆ ಊರು ಕೇರಿ ಭಾಗ 1 ಮತ್ತು ಭಾಗ 2ನ್ನು ಕನ್ನಡ ಸಾಹಿತ್ಯ ಎಂದಿಗೂ ಮರೆಯಲಾರದು.

ಅವರ ಊರು ಕೇರಿ ಆತ್ಕಥನ ಇಂಗ್ಲೀಷ್ ಮತ್ತು ತಮಿಳು ಭಾಷೆಗಳಿಗೆ ಅನುವಾದವಾಗಿದೆ. ಜತೆಗೆ ಅವರು ಬರೆದ ಕವಿತೆಗಳು ಭಾರತದ ಹಲವು ಭಾಷೆಗಳಿಗೆ ತರ್ಜುಮೆಗೊಂಡಿದ್ದು ಡಾ.ಸಿದ್ದಲಿಂಗಯ್ಯ ಅವರ ಹೆಸರು ಕನ್ನಡದ ಆಚೆಗೂ ಪಸರಿಸಿದೆ. ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿಗಳೂ ಅವರಿಗೆ ಸಂದಿವೆ.

 

Comments are closed.