ಕರಾವಳಿ

ಕರಾವಳಿಯಲ್ಲಿ ಐದು ದಿನಗಳ ಕಾಲ ಹೆಚ್ಚಿನ ಮಳೆ ಸಾಧ್ಯತೆ: ಉಡುಪಿಯಲ್ಲಿ 4 ದಿನ ಆರೆಂಜ್ ಅಲರ್ಟ್

Pinterest LinkedIn Tumblr

ಬೆಂಗಳೂರು: ರಾಜ್ಯ ಕರಾವಳಿ ಭಾಗದಲ್ಲಿ ಇಂದು ಗುಡುಗು ಸಿಡಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮೊದಲೆ ಎಚ್ಚರಿಸಿದ್ದು ಶನಿವಾರ ಮುಂಜಾನೆಯಿಂದ ಉಡುಪಿ‌ ಕರಾವಳಿಯಲ್ಲಿ ಉತ್ತಮ ಮಳೆಯಾಗುತ್ತಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಬೆಳಗಿನ ಸಮಯದಲ್ಲಿ ಸಿಡಿಲು ಗುಡುಗು ಸಹಿತ ಉತ್ತಮ ಮಳೆಯಾಗಲಿದೆ ಎಂದು ಇಲಾಖೆ ಸೂಚನೆ ನೀಡಿದೆ.

ಕರಾವಳಿ ಭಾಗದಲ್ಲಿ ಮುಂದಿನ ಐದು ದಿನಗಳ ಕಾಲ ಉತ್ತಮ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ.

Comments are closed.