ಕರಾವಳಿ

“ಕೋವಿಡ್ ಪರೀಕ್ಷೆಗಾಗಿ ಸಂಪರ್ಕಿಸಿ” :ಪಾಲಿಕೆಯಿಂದ ಸಹಾಯವಾಣಿ ಆರಂಭ

Pinterest LinkedIn Tumblr

 

ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರಸ್ತುತ ಶೇ. 17 ರಷ್ಟು ಕೋವಿಡ್ ಸೋಂಕಿತರ ಪ್ರಮಾಣ ವರದಿಯಾಗುತ್ತಿದ್ದು, ಕೋವಿಡ್ ಪರೀಕ್ಷೆ ಪ್ರಮಾಣವನ್ನು ವ್ಯಾಪಕವಾಗಿ ಹೆಚ್ಚಿಸಿಕೊಂಡು ಕೋವಿಡ್ 19 ಪಾಸಿಟಿವ್ ಪ್ರಕರಣಗಳನ್ನು ನಿಯಂತ್ರಿಸುವುದು ಅನಿವಾರ್ಯವಾಗಿದೆ.

ಆದರೆ ಸೋಂಕಿನ ಲಕ್ಷಣಗಳಿರುವ ವ್ಯಕ್ತಿಗಳು ತಪಾಸಣೆಗಾಗಿ ಸುತ್ತಾಡುತ್ತಿರುವುದರಿಂದ ಮತ್ತಷ್ಟು ಸೋಂಕು ಹರಡುವ ಸಾದ್ಯತೆಗಳಿರುವುದನ್ನು ತಡೆಗಟ್ಟುವ ಉದ್ದೇಶದಿಂದ ಹಾಗೂ ಪತ್ತೆ ಹಚ್ಚಲಾಗುವ ಪ್ರಾಥಮಿಕ ಸಂಪರ್ಕಿತರನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಲು ಸಂಚಾರಿ ಗಂಟಲು ದ್ರವ ಮಾದರಿ ಸಂಗ್ರಹಿಸುವ (Mobile Swab Collection Team) ತಂಡವನ್ನು ರಚಿಸಲಾಗಿದ್ದು, ಸದ್ರಿ ತಂಡವು ಸೋಂಕಿನ ಲಕ್ಷಣಗಳುಳ್ಳ ವ್ಯಕ್ತಿಗಳ ಸ್ಥಳಕ್ಕೆ ಬಂದು ಪರೀಕ್ಷೆ ಮಾಡುವ ವ್ಯವಸ್ಥೆಯನ್ನು ಪ್ರಾರಂಭಿಸಲಾಗಿದೆ.

ಈ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸದುಪಯೋಗಪಡಿಸಲು ಪಾಲಿಕೆ ವತಿಯಿಂದ “ಕೋವಿಡ್ ಪರೀಕ್ಷೆಗಾಗಿ ಸಂಪರ್ಕಿಸಿ” (Call For Covid Test) ಎಂಬ ಪರಿಕಲ್ಪನೆಯಲ್ಲಿ ಪ್ರತ್ಯೇಕವಾದ ದೂರವಾಣಿ ಸಂಖ್ಯೆ 0824-2455674 ನ್ನು ನಿಗಧಿಪಡಿಸಿಕೊಂಡು ಪಾಲಿಕೆ ಕೇಂದ್ರ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದೆ.

ಸದ್ರಿ ಸಹಾಯವಾಣಿ ಕೇಂದ್ರವು ಪ್ರತಿ ದಿನ ಪೂರ್ವಾಹ್ನ 08.00 ರಿಂದ ಸಾಯಂಕಾಲ 06.00 ರವರೆಗೆ ಕಾರ್ಯಚರಿಸಲಿದ್ದು, ಈ ಅವಧಿಯಲ್ಲಿ ಸಾರ್ವಜನಿಕರು ಕರೆಮಾಡಿ ಈ ಸೌಲಭ್ಯವನ್ನು ಪಡೆಯುವಂತೆ ಕೋರಲಾಗಿದೆ.

Comments are closed.