ಕರಾವಳಿ

ನಾಳೆಯಿಂದ ಶೈಕ್ಷಣಿಕ ವರ್ಷ ಆರಂಭ : ಲಾಕ್​ಡೌನ್ ತೆರವಾದ ಕೂಡಲೇ ಶಾಲೆಗಳಿಗೆ ಹಾಜರಾಗಲು ಸೂಚನೆ

Pinterest LinkedIn Tumblr

ಬೆಂಗಳೂರು, ಜೂನ್ 14 : ಕೋವಿಡ್ 19 ಕಡಿಮೆಯಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸರ್ಕಾರಿ, ಖಾಸಗಿ ಶಾಲೆಗಳ ಕಾರ್ಯಾರಂಭಕ್ಕೆ ಜೂ. 15 ರಿಂದಲೇ ಅವಕಾಶ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಶೈಕ್ಷಣಿಕ ವರ್ಷ ನಾಳೆಯಿಂದ ಆರಂಭವಾಗಲಿದ್ದು, ಈಗಾಗಲೇ ಮಾರ್ಗದರ್ಶಿ ಸೂತ್ರಗಳನ್ನು ಹೊರಡಿಸಲಾಗಿದೆಯಾದರೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಲಾಕ್​ಡೌನ್ ಜಾರಿಯಲ್ಲಿದ್ದು, ಶಿಕ್ಷಕರ ಚಲನವಲನಕ್ಕೆ ತೊಂದರೆಯಾಗಿರುವುದರಿಂದ ಶಿಕ್ಷಕರು ಲಾಕ್​ಡೌನ್ ತೆರವಾದ ದಿನದಿಂದಲೇ ಶಾಲೆಗಳಿಗೆ ಭೌತಿಕವಾಗಿ ಹಾಜರಾಗಲು ಅವಕಾಶ ನೀಡಲಾಗಿದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಂಗಳವಾರದಿಂದ ಶಾಲೆಗಳಿಗೆ ಶಿಕ್ಷಕರು ಹಾಜರಾಗಿ ಮಕ್ಕಳ ನೋಂದಣಿ ಪ್ರಾರಂಭಿಸಬೇಕಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಶಿಕ್ಷಕರ ಚಲನವಲನಕ್ಕೆ ತೊಂದರೆಯಾಗಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಪೂರ್ಣಗೊಂಡ ನಂತರ ಶಿಕ್ಷಕರು ಶಾಲೆಗಳಿಗೆ ಹಾಜರಾಗುವಂತೆ ಸುತ್ತೋಲೆ ಹೊರಡಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ‌ ಎಂದರು.

ಕೋವಿಡ್ 19 ಪಾಸಿಟಿವಿಟಿ ದರ ಕೆಲವು ಜಿಲ್ಲೆಗಳಲ್ಲಿ ಪಾಸಿಟೀವಿಟಿ ದರ ಕಡಿಮೆಯಾಗಿಲ್ಲ. ಹೀಗಾಗಿ ರಾಜ್ಯದ ಹನ್ನೊಂದು ಜಿಲ್ಲೆಗಳಲ್ಲಿ ಲಾಕ್ ಡೌನ್ ನಿಯಮ ಸಡಿಲಿಸಿಲ್ಲ. ಹೀಗಾಗಿ ಕೊರೊನಾ ಲಾಕ್ ಡೌನ್ ಕಠಿಣ ನಿಯಮ ಜಾರಿಯಲ್ಲಿರುವ ಶಿಕ್ಷಕರಿಗೆ ಪ್ರತ್ಯೇಕ ಮಾರ್ಗದರ್ಶಿ ಸೂತ್ರ ಪಾಲನೆಗೆ ಶಿಕ್ಷಣ ಇಲಾಖೆ ನಿರ್ದೇಶನ ನೀಡಿದೆ.

ಮಕ್ಕಳ ಕಲಿಕೆಗೆ ಪೂರ್ವ ತಯಾರಿಗೆ ಅವಕಾಶ ನೀಡಲಾಗಿತ್ತು. ಆದರೆ, ಕೊರೊನಾ ಸೋಂಕು ಹಿನ್ನೆಲೆಯಲ್ಲಿ ರಾಜ್ಯದ ಹನ್ನೊಂದು ಜಿಲ್ಲೆಗಳಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ ಕಠಿಣ ನಿರ್ಬಂಧಗಳು ಜಾರಿಯಲ್ಲಿವೆ.

ಹೀಗಾಗಿ ಈ ಶೈಕ್ಷಣಿಕ ಜಿಲ್ಲೆಗಳಲ್ಲಿಕೆಲಸ ಮಾಡುವ ಶಿಕ್ಷಕರು ಮನೆಯಿಂದಲೇ ಜೂ. 21 ರ ವರೆಗೂ ಕೆಲಸ ನಿರ್ವಹಿಸಬೇಕು. ಕಠಿಣ ಲಾಕ್ ಡೌನ್ ನಿಯಮಗಳನ್ನು ಭಾಗಶಃ ತೆರವುಗೊಳಿಸುವವರೆಗೂ ಶಿಕ್ಷಕರು ಶಾಲೆಗೆ ಹೋಗುವಂತಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ತಿಳಿಸಿದ್ದಾರೆ.

Comments are closed.