ಕರಾವಳಿ

ಜೂನ್.21ರಿಂದ ಮಾಲ್, ರೆಸ್ಟೋರೆಂಟ್, ಮದುವೆ ಮಂಟಪಗಳು, ಶಾಪಿಂಗ್ ಕಾಂಪ್ಲೆಕ್ಸ್ ಪುನರಾರಂಭ!

Pinterest LinkedIn Tumblr

ಬೆಂಗಳೂರು, ಜೂನ್.17: ಜೂನ್.21ರಿಂದ ರಾಜ್ಯದಲ್ಲಿ ಮಾಲ್, ರೆಸ್ಟೋರೆಂಟ್, ಮದುವೆ ಮಂಟಪಗಳು, ಶಾಪಿಂಗ್ ಕಾಂಪ್ಲೆಕ್ಸ್’ನ್ನು ಪುನರಾರಂಭಿಸಬಹುದು. ನಿಯಂತ್ರಿತ ಸಂಖ್ಯೆಯ ಜನರು ಸೇರುವಂತೆ ನೋಡಿಕೊಳ್ಳಬೇಕು ಎಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಸಲಹೆ ನೀಡಿದೆ.

ಈ ಕುರಿತಂತೆ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದ್ದು, ಸಭೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕೆಲ ಆರ್ಥಿಕ ಚಟುವಟಿಕೆಗಳನ್ನು ಆರಂಭಿಸಬಹುದು ಎಂಬ ನಿರ್ಧಾರಕ್ಕೆ ಬರಲಾಗಿದೆ.

ಜೂನ್ ಅಂತ್ಯದವರೆಗೂ ನೈಟ್ ಕರ್ಫ್ಯೂ ಮುಂದುವರೆಸಬೇಕು. ಸಾರ್ವಜನಿಕ ರ್‍ಯಾಲಿ, ಧರಣಿ, ಜಾತ್ರೆ ಹಾಗೂ ಹಬ್ಬಗಳ ಮೇಲೆ ನಿರ್ಬಂಧ ಹೇರಬೇಕು. ಜೂನ್.21ರಿಂದ 2ನೇ ಹಂತದ ಅನ್’ಲಾಕ್ ಆರಂಭವಾಗಲಿದ್ದು, ಜೂನ್.5 ರಿಂದ ಮೂರನೇ ಹಂತದ ಅನ್’ಲಾಕ್ ಆರಂಭವಾಗಲಿದೆ.

ಅನ್’ಲಾಕ್ 2 ಹಂತದಲ್ಲಿ ರೆಸ್ಟೋರೆಂಟ್, ಮಾಲ್, ಕಟಿಂಗ್ ಶಾಪ್, ಸಲೂನ್, ಸ್ಪಾ, ಮದುವೆ ಮಂಟಪ ಗಳನ್ನು ತೆರೆಯಬಹುದು. ಆದರೆ, ಶೇ.50ರಷ್ಟು ಜನರು ಸೇರುವಂತೆ ಸೂಚಿಸಬೇಕು. ಅಲ್ಲದೆ, ಅನ್ಲಾಕ್ 2.0 ಮತ್ತು 3.0 ರ ನಡುವೆ ಎರಡು ವಾರಗಳ ಅಂತರ ಇರುವಂತೆಯೂ ಸೂಚಿಸಿದೆ.

ಈ ಪ್ರದೇಶಗಳಲ್ಲಿ ಹೆಚ್ಚೆಚ್ಚು ಜನರು ಸೇರುವುದರಿಂದ ಸೋಂಕು ಹೆಚ್ಚಾಗಿ ಹರಡಲಿದ್ದು, ಎರಡರ ನಡುವೆ 2 ವಾರಗಳ ಅಂತರ ಇರಬೇಕೆಂದು ಸರ್ಕಾರಕ್ಕೆ ತಿಳಿಸಿದೆ.

ಅನ್’ಲಾಕ್ 3ನೇ ಹಂತದಲ್ಲಿ ಜಿಮ್, ಯೋಗಾ ಕೇಂದ್ರ, ಧಾರ್ಮಿಕ ಕೇಂದ್ರಗಳು, ಚಿತ್ರಮಂದಿರಗಳು, ಸ್ಫೋರ್ಟ್ಸ್ ಕ್ಲಬ್, ಕ್ಲಬ್ ಹೌಸ್, ಸಾರ್ವಜನಿಕ ಶೌಚಾಲಯ ಆರಂಭಿಸಬೇಕು.

ನೈಟ್ ಕರ್ಫ್ಯೂ, ಶಾಲಾ ಕಾಲೇಜುಗಳು ಪುನರಾರಂಭ ಕುರಿತು ಪ್ರತ್ಯೇಕವಾಗಿ ನಿರ್ಧಾರ ಕೈಗೊಳ್ಳುವಂತೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ತಿಳಿಸಿದೆ.

Comments are closed.