ಕರಾವಳಿ

ಕಲಿಯುತ್ತಾ ಬದುಕೋಣ.. ಬದುಕಲು ಕಲಿಸೋಣ : ಸ್ವಾಮಿ ವೀರೇಶಾನಂದ ಸರಸ್ವತೀಯವರಿಂದ ನಾಳೆ ಪ್ರವಚನ

Pinterest LinkedIn Tumblr

ಮಂಗಳೂರು, ಜೂನ್ 18 : ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ಜಿಲ್ಲಾ ಶೈಕ್ಷಣಿಕ ಸಂವರ್ಧನಾ ಕಾರ್ಯಕ್ರಮದಡಿಯಲ್ಲಿ ಶಿಕ್ಷಕರ ಆತ್ಮಸ್ಥೈರ್ಯವನ್ನು ಉತ್ತೇಜಿಸುವ ಬಗ್ಗೆ ಆನ್ ಲೈನ್ ಮೂಲಕ ಪ್ರವಚನ ಕಾರ್ಯಕ್ರಮನ್ನು ಹಮ್ಮಿಕೊಳ್ಳಲಾಗಿದೆ.

ರಾಮಕೃಷ್ಣ ವಿವೇಕಾನಂದ ಆಶ್ರಮದ ಪೂಜ್ಯ ಸ್ವಾಮಿ ವೀರೇಶಾನಂದ ಸರಸ್ವತೀ ಇವರ ಅಧ್ಯಕ್ಷತೆಯಲ್ಲಿ ‘ಕಲಿಯುತ್ತಾ ಬದುಕೋಣ..ಬದುಕಲು ಕಲಿಸೋಣ…’ ಎಂಬ ಪ್ರವಚನವನ್ನು ಜೂನ್ 19 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಯೂ ಟ್ಯೂಬ್ ಲಿಂಕ್https://youtu.be/FOTkAk8xKHk ಮೂಲಕ ನೇರ ಪ್ರಸಾರಗೊಳ್ಳಲಿದೆ.

ಸದರಿ ಪ್ರವಚನದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಎಲ್ಲಾ ಅಧಿಕಾರಿ ವರ್ಗ ಮತ್ತು ಎಲ್ಲಾ ಪ್ರಾಥಮಿಕ ಹಾಗೂ ಫ್ರೌಡಶಾಲಾ ಶಿಕ್ಷಕರು, ಎಲ್ಲಾ ಸರ್ಕಾರಿ , ಅನುದಾನಿತ ಮತ್ತು ಖಾಸಗಿ ಅನುದಾನರಹಿತ ಪ್ರಾರ್ಥಮಿಕ ಮತ್ತು ಫ್ರೌಢಶಾಲೆಗಳ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗ, ಜಿಲ್ಲೆಯ ಎಲ್ಲಾ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಸಮಾಜ ಕಲ್ಯಾಣ ಇಲಾಖೆ ಹಾಗೂ ಅಲ್ಪ ಸಂಖ್ಯಾತ ಇಲಾಖೆಯಡಿ ಬರುವ ಎಲ್ಲಾ ಫ್ರಾರ್ಥಮಿಕ ಮತ್ತು ಫ್ರೌಢಶಾಲೆಗಳ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗ, ಜಿಲ್ಲಾ ತರಬೇತಿ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಎಲ್ಲಾ ಹಿರಿಯ ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗ, ಜಿಲ್ಲೆಯ ಎಲ್ಲಾ ಶಿಕ್ಷಕರ ತರಬೇತಿ ಸಂಸ್ಥೆಗಳ ಬೋಧಕ ಮತ್ತು ಭೋದಕೇತರ ವರ್ಗದವರು, ಉಪನಿರ್ದೇಶಕರ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಯವರ ಕಚೇರಿಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ, ಜಿಲ್ಲೆಯ ಸರ್ವಜನಿಕ ಶಿಕ್ಷಣ ಇಲಾಖೆಯ ಎಲ್ಲಾ ಸ್ಥರದ ಅಧಿಕಾರಿಗಳು, ಆಸಕ್ತ ಶಾಲಾ ಎನ್.ಡಿ.ಎಂ.ಸಿ ಸದಸ್ಯರು ಹಾಗು ಸಾರ್ವಜನಿಕರು ಭಾಗವಹಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.