ಕರಾವಳಿ

ಎಸ್‌ಸಿಡಿಸಿಸಿ ಬ್ಯಾಂಕ್ ವತಿಯಿಂದ ಪತ್ರಕರ್ತರಿಗೆ ಆಹಾರ-ದಾನ್ಯದ ಕಿಟ್ ವಿತರಣೆ

Pinterest LinkedIn Tumblr

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಪತ್ರಕರ್ತರಿಗೆ ಆಹಾರ-ದಾನ್ಯದ ಕಿಟ್ ವಿತರಿಸುವ ಕಾರ್ಯಕ್ರಮ ಕೊಡಿಯಾಲ್ ಬೈಲ್‌ನ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಜರಗಿತು.

ಸರ್ಕಾರದ ಕೋವಿಡ್ ಮಾರ್ಗಸೂಚಿಯಂತೆ ನಡೆದ ಸರಳ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಮಾತನಾಡಿ, ರಾಜ್ಯದಲ್ಲಿ ಪತ್ರಕರ್ತರನ್ನು ಕೋವಿಡ್ ವಾರಿಯರ್ಸ್ ಎಂದು ಪರಿಗಣಿಸಿ ಕೋವಿಡ್ ಲಸಿಕೆ ಹಾಕಲು ಈಗಾಗಲೇ ವ್ಯವಸ್ಥೆ ಮಾಡಲಾಗಿದೆ.

ಪತ್ರಕರ್ತರ ಉಳಿದ ಬೇಡಿಕೆಗಳ ಈಡೇರಿಕೆಗೆ ಸೂಕ್ತವಾಗಿ ಸ್ಪಂದಿಸಲಿದೆ. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಕೂಡ ಪತ್ರಕರ್ತರಿಗೆ ಆಹಾರ-ದಾನ್ಯದ ಕಿಟ್ ವಿತರಿಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಬ್ಯಾಂಕ್ ನ ಅಧ್ಯಕ್ಷ ಡಾ.ಎಂ. ಎನ್. ರಾಜೇಂದ್ರ ಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೋವಿಡ್ ಆರಂಭವಾದ ಬಳಿಕ ನಮ್ಮ ಬ್ಯಾಂಕ್ ಸರಕಾರಕ್ಕೆ ಸಹಕಾರ ನೀಡುತ್ತಿದೆ. ಆರೋಗ್ಯ ಇಲಾಖೆ, ಪೊಲೀಸ್ ಸಿಬ್ಬಂದಿಗೆ ಈಗಾಗಲೇ ನೆರವು ನೀಡಲಾಗಿದೆ. ಬೆಂಗಳೂರಿನಲ್ಲೂ ವಿವಿಧ ವರ್ಗದ ಜನರಿಗೆ 2 ಲಕ್ಷ ಅಕ್ಕಿ ಚೀಲ, 1 ಲಕ್ಷ ಮಾಸ್ಕ್ ವಿತರಿಸಲಾಗಿದೆ ಎಂದು ಡಾ.ಎಂ. ಎನ್. ರಾಜೇಂದ್ರ ಕುಮಾರ್ ತಿಳಿಸಿದರು.

ಅತಿಥಿಗಳಾಗಿ ಉತ್ತರ ಶಾಸಕ ಡಾ. ಭರತ್ ಶೆಟ್ಟಿ, ಮೇಯರ್ ಪ್ರೇಮನಂದ ಶೆಟ್ಟಿ, ಸಹಕಾರ ಸಂಘಗಳ ಉಪನಿಬಂಧಕ ಪ್ರವೀಣ್ ನಾಯಕ್, ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರವೀಣ್ ಕುಮಾರ್, ನಬಾರ್ಡ್ ಅಧಿಕಾರಿ ಸಂಗೀತಾ ಕರ್ತಾ ಭಾಗವಹಿಸಿದ್ದರು.

ಬ್ಯಾಂಕ್ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕ ಭಾಸ್ಕರ್ ಕೋಟ್ಯಾನ್, ಬ್ಯಾಂಕಿನ ಸಿಇಓ ರವೋಂದ್ರ ಬಿ ಮತ್ತು ಬ್ಯಾಂಕಿಗೆ ಸಂಬಂಧ ಪಟ್ಟ ಇತರ ನಿರ್ದೇಶಕರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು,

Comments are closed.