ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ 13 ಜಿಲ್ಲೆಗಳಲ್ಲಿ ಮತ್ತೆ ಲಾಕ್‌ಡೌನ್ :16 ಜಿಲ್ಲೆಗಳಲ್ಲಿ ಸಡಿಲಿಕೆ

Pinterest LinkedIn Tumblr

ಬೆಂಗಳೂರು, ಜೂನ್.19: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ 13 ಜಿಲ್ಲೆಗಳಲ್ಲಿ ಮತ್ತೆ ಲಾಕ್ ಡೌನ್ ಮುಂದುವರೆಸಲು ನಿರ್ಧರಿಸಲಾಗಿದೆ. ಇದೇ ವೇಳೆ ರಾಜ್ಯದಲ್ಲಿ ಶೇ. 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವಂತ 16 ಜಿಲ್ಲೆಗಳಲ್ಲಿ ಅನ್ ಲಾಕ್ ಮಾಡಲಾಗುತ್ತಿದೆ.

ಈ ಕುರಿತಂತೆ ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಕೋವಿಡ್ ಉಸ್ತುವಾರಿ ಸಚಿವರು, ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಕಳೆದ ಒಂದು ವಾರದಲ್ಲಿ 16 ಜಿಲ್ಲೆಗಳಲ್ಲಿ ಶೇ.5ಕ್ಕಿಂತ ಕಡಿಮೆ ಪಾಸಿಟಿವ್ ದರ ಇದೆ. 13 ಜಿಲ್ಲೆಗಳಲ್ಲಿ 5-10 ಇದೆ. ಮೈಸೂರು ಜಿಲ್ಲೆಯಲ್ಲಿ 10ಕ್ಕಿಂತ ಹೆಚ್ಚು ಇದೆ. ಪಾಸಿಟಿವಿಟಿ ದರಗಳು ಹೆಚ್ಚಿರುವಂತ 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಪಾಸಿಟಿವಿಟಿ ರೇಟ್ ಶೇ. 5 ಕ್ಕಿಂತ ಕಡಿಮೆ ಇರುವ 16 ಜಿಲ್ಲೆಗಳಲ್ಲಿ ಮಾತ್ರ ನಿರ್ಬಂಧ ಸಡಿಲಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಇದರ ಪ್ರಕಾರ, ಬೆಳಗ್ಗೆಯಿಂದ ಸಂಜೆ 5ರವರೆಗೆ ಎಲ್ಲ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ನೀಡಲಾಗಿದೆ. ಸೋಮವಾರದಿಂದ (ಜೂನ್ 21) ಸರ್ಕಾರಿ ಬಸ್​ಗಳ ಶೇ 50ರ ಅವಕಾಶದೊಂದಿಗೆ ಓಡಾಟಕ್ಕೆ ಅನುಮತಿ ನೀಡಲಾಗಿದೆ.

ಅನ್​ಲಾಕ್ ಭಾಗವಾಗಿ ೧೬ ಜಿಲ್ಲೆಗಳಲ್ಲಿ ಶೇ.50ರಷ್ಟು ಪ್ರಯಾಣಿಕರೊಂದಿಗೆ ಸಾರಿಗೆ ಸಂಚಾರ, ಹೋಟೆಲ್, ಬಾರ್ ಅಂಡ್ ರೆಸ್ಟೋರೆಂಟ್ ಗಳನ್ನು ಸಹ ಶೇ.50ರಷ್ಟು ಜನರೊಂದಿಗೆ ತೆರೆಯೋದಕ್ಕೂ ಅವಕಾಶ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಪಾಸಿಟಿವಿಟಿ ರೇಟ್ ಶೇ.5ಕ್ಕಿಂತ ಕಡಿಮೆ ಇರುವ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ ಸೇರಿದಂತೆ ಗದಗ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ, ಈ ಕೆಳಕಂಡಂತೆ ಸಡಿಲಿಕೆ ಮಾಡಲು ತೀರ್ಮಾನಿಸಲಾಗಿದೆ.

ಶೇ.5ಕ್ಕಿಂತ ಹೆಚ್ಚು ಇರುವಂತ 13 ಜಿಲ್ಲೆಗಳಾದಂತ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ದಾವಣಗೆರೆ, ಧಾರವಾಡ, ಕೊಡಗು ಬಳ್ಳಾರಿ, ಚಿತ್ರದುರ್ಗ, ವಿಜಯಪುರ ಜಿಲ್ಲೆಗಳಲ್ಲಿ ದಿನಾಂಕ 11-06-2021ರ ಆದೇಶವೇ ಮುಂದುವರೆಯಲಿದೆ. ಶೇ.10ಕ್ಕಿಂತ ಹೆಚ್ಚಿರುವಂತ ಮೈಸೂರು ಜಿಲ್ಲೆಯಲ್ಲಿ ಈಗ ಇರುವಂತ ನಿಬಂಧನೆಗಳು ಯಥಾಸ್ಥಿತಿ ಮುಂದುವರೆಯಲಿದೆ.

ನಿರ್ಭಂಧಗಳ ಸಡಿಲಿಕೆ ಆಗಿರುವ ಜಿಲ್ಲೆಗಳಲ್ಲಿ ಏನಿರುತ್ತೆ, ಏನಿರಲ್ಲ- ಇಲ್ಲಿದೆ ವಿವರ

ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ ಸಂಚಾರಕ್ಕೆ ಅವಕಾಶ

ರಾಜ್ಯಾದ್ಯಂತ ಕೆ ಎಸ್ ಆರ್ ಟಿಸಿ ಬಸ್ ಸಂಚಾರಕ್ಕೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್

ಮದ್ಯಪಾನ ಹೊರತುಪಡಿಸಿ ಹೋಟೆಲ್ ಗಳನ್ನು ತೆರೆಯಲು ಅವಕಾಶವಿದೆ

ಬಸ್, ಮೆಟ್ರೋ ಸಂಚಾರ ಇರಲಿದೆ, ಆದರೆ 50 % ಪ್ರಯಾಣಿಕರಿಗೆ ಮಾತ್ರ ಅವಕಾಶ

50% ಪ್ರೇಕ್ಷಕರೊಂದಿಗೆ ಥಿಯೇಟರ್ ತೆರೆಯಲು ಅವಕಾಶ

ಎಲ್ಲಾ ಅಂಗಡಿಗಳನ್ನು ಬೆಳಗ್ಗೆಯಿಂದ ಸಂಜೆ 5 ಗಂಟೆವರೆಗೆ ತೆರೆಯಲು ಅವಕಾಶ

ಎಸಿ ಚಾಲನೆ ಇಲ್ಲದೇ ಹೋಟೆಲ್, ಕ್ಲಬ್, ರೆಸ್ಟೊರೆಂಟ್ ಓಪನ್

ಹೊರಾಂಗಣ ಚಿತ್ರೀಕರಣಕ್ಕೆ ಅನುಮತಿ

ಬಸ್, ಮೆಟ್ರೋ ಸಂಚಾರಕ್ಕೆ ಅವಕಾಶ

ವೀಕ್ಷಕರಿಲ್ಲದೇ ಹೊರಾಂಗಣ ಕ್ರೀಡೆ

ಸರ್ಕಾರಿ, ಖಾಸಗಿ ಕಚೇರಿ ಶೇಕಡ 50 ರಷ್ಟು ಸಿಬ್ಬಂದಿ ಕಾರ್ಯನಿರ್ವಹಣೆ

ಲಾಡ್ಜ್, ರೆಸಾರ್ಟ್ ಗಳಲ್ಲಿ ಶೇಕಡ 50 ಸಾಮರ್ಥ್ಯ

ಹೊರಾಂಗಣ ಕ್ರೀಡೆಗೆ ಅವಕಾಶ, ಆದರೆ ವೀಕ್ಷಕರ ಪ್ರವೇಶ ನಿರ್ಬಂಧ.

ರಾಜ್ಯಾಧ್ಯಂತ ನೈಟ್ ಕರ್ಪ್ಯೂ, ವಾರಾಂತ್ಯ ಕರ್ಪ್ಯೂ ಹಾಗೆಯೇ ಮುಂದುವರೆಯಲಿದೆ. ಬಸ್ ಸಂಚಾರ ಶೇ.50ರಷ್ಟು ಪ್ರಯಾಣಿಕರಿಗೆ ಮಿತಿಗೊಳಿಸಿ, ಸಂಚಾರಕ್ಕೆ ಅನುಮತಿ ನೀಡಲಾಗಿದೆ.

ಇಡೀ ರಾಜ್ಯದಲ್ಲಿ ನಿರ್ಬಂಧಿಸಿರುವಂತ ಚಟುವಟಿಕೆಗಳು, ಈಜುಕೊಳ, ಸಭೆ ಸಮಾರಂಭ, ಪೂಜಾ ಸ್ಥಳ, ಶಾಫಿಂಗ್ ಮಾಲ್, ಅಮ್ಯೂಸ್ ಮೆಂಟ್ ಪಾರ್ಕ್, ಪಬ್ ಗಳಿಗೆ ನಿರ್ಬಂಧಿಸಲಾಗಿದೆ.

ಈ ಆದೇಶವು ಜುಲೈ.5ರವರೆಗೆ ಜಾರಿಯಲ್ಲಿರಲಿದ್ದು, ಅಲ್ಲಿಯವರೆಗೆ ವಾರಾಂತ್ಯ ಹಾಗೂ ನೈಟ್ ಕರ್ಪ್ಯೂ ಮುಂದುವರೆಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.

Comments are closed.