ಕರಾವಳಿ

ಜೂನ್ 21ರಂದು ಕ್ರೀಡಾಪಟುಗಳಿಗೆ ಕೋವಿಡ್ ಲಸಿಕೆ

Pinterest LinkedIn Tumblr

ಮಂಗಳೂರು, ಜೂನ್.20 : ಅಂತರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಕ್ರೀಡಾಪಟುಗಳಿಗೆ ಕೋವಿಡ್ ಲಸಿಕಾಕರಣ ಶಿಬಿರವನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ದ.ಕ.ಜಿಲ್ಲೆ ಸಹಯೋಗದೊಂದಿಗೆ ಜೂನ್ 21ರಂದು ರಂದು ಬೆಳಿಗ್ಗೆ 9.30 ಗಂಟೆಗೆ ಯು.ಎಸ್. ಮಲ್ಯ ಒಳಾಂಗಣ ಕ್ರೀಡಾಂಗಣ, ಮಂಗಳೂರು ಇಲ್ಲಿ ಆಯೋಜಿಸಲಾಗಿರುತ್ತದೆ.

ಲಸಿಕೆ ಪಡೆಯಲು ಇಚ್ಚಿಸುವ ಕ್ರೀಡಾಪಟುಗಳು ಆಧಾರ್ ಕಾರ್ಡ್, ಕ್ರೀಡಾ ಸಾಧನೆಯ ಪ್ರಮಾಣ ಪತ್ರದೊಂದಿಗೆ ಬೆಳಿಗ್ಗೆ 9.30 ಗಂಟೆಯೊಳಗೆ ಹಾಜರಿರುವಂತೆ ಉಪ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಚೇರಿ ಪ್ರಕಟಣೆ ತಿಳಿಸಿದೆ.

Comments are closed.