ಕರಾವಳಿ

ದ.ಕ.ಜಿಲ್ಲೆಯಲ್ಲಿ ನಾಳೆಯಿಂದ ಹೊಸ ರೀತಿಯ ಲಾಕ್‌ಡೌನ್ : ಅಗತ್ಯ ಸಾಮಗ್ರಿಗಳ ಖರೀದಿಗೆ ಸಮಯ ವಿಸ್ತರಣೆ

Pinterest LinkedIn Tumblr

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಸೋಮವಾರದಿಂದ ಲಾಕ್‌ಡೌನ್ ಸಡಿಲಿಕೆ ಮಾಡಲಾಗಿದ್ದು, ಬೆಳಗ್ಗೆ 7ರಿಂದ ಮಧ್ಯಾಹ್ನ 1ರವರೆಗೆ ಅಗತ್ಯ ಸಾಮಗ್ರಿಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ.

ದ.ಕ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕು ಪ್ರಕರಣ ತಡೆಗಟ್ಟುವ ನಿಟ್ಟಿನಲ್ಲಿ ಲಾಕ್​ಡೌನ್ ವಿಸ್ತರಿಸಲು ನಿರ್ಧರಿಸಿರುವುದಾಗಿ ದ.ಕ.ಜಿಲ್ಲಾಧಿಕಾರಿ ಭಾನುವಾರ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಇನ್ನಷ್ಟು ಕೋವಿಡ್ ನಿರ್ಬಂಧಗಳನ್ನು ಸಡಿಲಿಕೆ ಮಾಡುವ ಮೂಲಕ ಜುಲೈ 5ರವರೆಗೆ ಲಾಕ್​ಡೌನ್ ವಿಸ್ತರಿಸಿರುವುದಾಗಿ ಅವರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ ಸೋಂಕು ಪ್ರಕರಣ ತಡೆಗಟ್ಟುವ ನಿಟ್ಟಿನಲ್ಲಿ ಕೆಲವೊಂದು ನಿರ್ಬಂಧ ಸಡಿಲಿಕೆ ಮಾಡಲಾಗಿದೆ. ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 7ರಿಂದ ಮದ್ಯಾಹ್ನ 1 ಗಂಟೆಯವರೆಗೆ ಅವಕಾಶ ನೀಡಲಾಗಿದೆ.

ಜೂನ್ 28ರವರೆಗೆ ಅಥವಾ ಜುಲೈ 5ರವರೆಗೆ ಲಾಕ್‌ಡೌನ್ ಸಡಿಲಿಕೆ ಬಗ್ಗೆ ಇನ್ನೂ ನಿರ್ಧರಿಸಿಲ್ಲ. ಪರಿಸ್ಥಿತಿಯನ್ನು ಅವಲೋಕಿಸಿ ಆ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುವುದು ಎಂದು ದ.ಕ.ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ರಾತ್ರಿ 7ರಿಂದ ಬೆಳಗ್ಗೆ 7ರವರೆಗೆ ಕರ್ಫ್ಯೂ ಜಾರಿ :

ಪ್ರತಿ ದಿನ ರಾತ್ರಿ 7ರಿಂದ ಬೆಳಗ್ಗೆ 7ರವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ. ಅಲ್ಲದೆ ಶುಕ್ರವಾರ ರಾತ್ರಿ 7ರಿಂದ ಸೋಮವಾರ ಬೆಳಗ್ಗೆ 7ರವರೆಗೆ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ.

ಬಸ್ ಸಂಚಾರಕ್ಕೆ ಅವಕಾಶವಿಲ್ಲ. ಆದರೆ ರಿಕ್ಷಾ ಮತ್ತು ಟ್ಯಾಕ್ಸಿಗಳ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೇವಲ ಇಬ್ಬರು ಪ್ರಯಾಣಿಕರನ್ನು ಕರೆದೊಯ್ಯಬಹುದಾಗಿದೆ. ಬೆಳಗ್ಗೆ 7ರಿಂದ ಮಧ್ಯಾಹ್ನ 1ರವರೆಗೆ ಬೀದಿ ಬದಿ ವ್ಯಾಪಾರ, ದಿನಸಿ ಅಂಗಡಿ, ಮಾಂಸ, ತರಕಾರಿ ಅಂಗಡಿಗಳನ್ನು ತೆರೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

Comments are closed.