ಕರಾವಳಿ

ವಿಮಾನ ನಿಲ್ದಾಣದಲ್ಲಿ ಉದ್ಯೋಗ ಅವಕಾಶ : ಅರ್ಜಿ ಸಲ್ಲಿಸಲು ಜೂನ್ 25 ಕೊನೆಯ ದಿನ

Pinterest LinkedIn Tumblr

ಮಂಗಳೂರು, ಜೂನ್ 24 : ಭಾರತ ಸರ್ಕಾರ ಬ್ಯೂರೋ ಆಫ್ ಇಮಿಗ್ರೇಷನ್ ರವರು ಸ್ಥಳೀಯ ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಮಿಗ್ರೇಷನ್ ಅಸಿಸ್ಟೆಂಟ್, ಐ.ಎ ಅಂಡ್ ಇಮಿಗ್ರೇಷನ್ ಸಪೋರ್ಟ್ ಹಾಗೂ ಐ.ಎಸ್ ಹುದ್ದೆಗಳಿಗೆ ಮಾಜಿ ಸೈನಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹರು ಡಿ.ಜಿ.ಆರ್ ವೆಬ್‍ಸೈಟ್‍ನಲ್ಲಿರುವ ಮಾಹಿತಿ ಪಡೆಯಬಹುದು.

ಅರ್ಜಿ ಸಲ್ಲಿಸಲು ಜೂನ್ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ಕಾರ್ಯಾಲಯ, ಮಂಗಳೂರು ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.