ಕರ್ನಾಟಕ

ಹತ್ಯೆಯಾದ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಮೃತದೇಹ ಕುಟುಂಬಕ್ಕೆ ಹಸ್ತಾಂತರ | ನಾಲ್ವರು ಆರೋಪಿಗಳ ಬಂಧನ..?

Pinterest LinkedIn Tumblr

ಬೆಂಗಳೂರು: ಬಿಬಿಎಂಪಿಯ ಮಾಜಿ ಸದಸ್ಯೆ ರೇಖಾ ಕದಿರೇಶ್ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ವಿಧಿವಿಧಾನ ಮುಗಿದ ಬಳಿಕ ಅವರ ಕುಟುಂಬಸ್ಥರಿಗೆ ಶುಕ್ರವಾರ ಬೆಳಗ್ಗೆ ಮೃತದೇಹ ಹಸ್ತಾಂತರಿಸಲಾಗಿದೆ.

ಹತ್ಯೆ ಪ್ರಕರಣ ಸಂಬಂಧ ಇದುವರೆಗೆ ನಾಲ್ವರು ಶಂಕಿತರನ್ನು ಕಾಟನ್ ಪೇಟೆ ಪೊಲೀಸರು ವಶಕ್ಕೆ ಪಡೆದುಕೊಂಡು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಕೊಲೆಗೆ ಸಂಚು ಮತ್ತು ಸಹಕಾರ ರೂಪಿಸಿದ ಶಂಕೆ ಮೇಲೆ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ.

ರೇಖಾ ಕದಿರೇಶ್ ಅವರ ಅಂತಿಮ ದರ್ಶನ ಪಡೆಯಲು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಆಗಮಿಸಿದರು. ಈ ಸಂದರ್ಭದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ರೇಖಾ ಕದಿರೇಶ್ ಅವರು ಬಿಜೆಪಿ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದರು. ಛಲವಾದಿಪಾಳ್ಯದಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಅವರ ಹತ್ಯೆ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಶೋಕ ವ್ಯಕ್ತಪಡಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತಪ್ಪಿತಸ್ಥರು ಯಾರೇ ಆದರೂ ಸೂಕ್ತ ಕ್ರಮ ಕೈಗೊಂಡು ಶಿಕ್ಷೆ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.

ಇನ್ನು ಛಲವಾದಿಪಾಳ್ಯದ ಫ್ಲವರ್ ಗಾರ್ಡನ್ ನ ಬಿಜೆಪಿ ಕಚೇರಿ ಮುಂಭಾಗದಲ್ಲಿ ರೇಖಾ ಕದಿರೇಶ್ ಅವರ ಪಾರ್ಥಿವ ಶರೀರವನ್ನು ಇಡಲಾಗುತ್ತಿದ್ದು ಅಂತಿಮ ದರ್ಶನ ಪಡೆಯಲು ಸಿದ್ಧತೆ ಮಾಡಲಾಗುತ್ತಿದೆ. ಕೋವಿಡ್-19 ನಿರ್ಬಂಧ ಹಿನ್ನೆಲೆಯಲ್ಲಿ ಸೀಮಿತ ಜನರಿಗೆ ಮಾತ್ರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಇನ್ನು ಮೂರರಿಂದ ನಾಲ್ಕು ಗಂಟೆಗಳ ಕಾಲ ಅಂತಿಮ ದರ್ಶನಕ್ಕೆ ಇಟ್ಟು ನಂತರ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ.

 

Comments are closed.