ಕರ್ನಾಟಕ

ಮಾಜಿ ಕಾರ್ಪೋರೇಟರ್’ನ್ನು ಕೊಂದು ಪರಾರಿಯಾದ ಇಬ್ಬರು ಆರೋಪಿಗಳ ಮೇಲೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

Pinterest LinkedIn Tumblr

ಬೆಂಗಳೂರು: ಬಿಜೆಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆಯ ಪ್ರಮುಖ ಆರೋಪಿಗಳಾದ ಪೀಟರ್ ಮತ್ತು ಸೂರ್ಯ ಎನ್ನುವರನ್ನು ಪೊಲೀಸರು ಶುಕ್ರವಾರ ಮಧ್ಯಾಹ್ನ ಬಂಧಿಸಿದ್ದಾರೆ.

ಬೆಂಗಳೂರಿನ ಕಾಮಾಕ್ಷಿಪಾಳ್ಯದ ಸುಮನಹಳ್ಳಿಯ ಶನಿ ಮಹಾತ್ಮ ದೇವಸ್ಥಾನದ ಬಳಿ ಆರೋಪಿಗಳು ಪೊಲೀಸರಿಗೆ ಸಿಕ್ಕಿದ್ದಾರೆ. ಗುರುವಾರ ಬೆಳಿಗ್ಗೆ ಹತ್ಯೆ ನಡೆದಿದ್ದು ಕೇವಲ 24 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸುವ ಮೂಲಕ ಪೊಲೀಸರು ತಮ್ಮ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳಿಗೆ ಆರಂಭದಲ್ಲಿ ಪೊಲೀಸರು ಶರಣಾಗುವಂತೆ ಹೇಳಿದರೂ ಕೇಳಲಿಲ್ಲ. ಪೊಲೀಸರ ಮೇಲೆ ದಾಳಿಗೆ ಮುಂದಾಗಿದ್ದು ಅನಿವಾರ್ಯವಾಗಿ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ಇನ್ಸ್‌ಪೆಕ್ಟರ್ ಗಳಾದ ಶಿವಾನಂದ್ ಮತ್ತು ಚಿದಾನಂದ್ ಫೈರಿಂಗ್ ಮಾಡಿದ್ದಾರೆ. ಸದ್ಯ ಗಾಯಾಳು ಆರೋಪಿಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರೇಖಾ ಕದಿರೇಶ್ ಅವರ ಕುತ್ತಿಗೆ ಮತ್ತು ಹೊಟ್ಟೆಗೆ 12 ಬಾರಿ ಇರಿದು ಕೊಂದಿದ್ದ ಆರೋಪಿಗಳು ಪರಾರಿಯಾಗಿದ್ದರು. ಇಂದು ಮದ್ಯಪಾನ ಮಾಡುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

Comments are closed.