ಕರಾವಳಿ

ಡ್ರಗ್ಸ್ ಸೇವನೆ, ಪೂರೈಕೆಗೆ ಸಂಬಂಧಿಸಿ ಏನೇ ಮಾಹಿತಿ ಇದ್ದರೂ ಪೊಲೀಸರಿಗೆ ಮಾಹಿತಿ ನೀಡಿ: ಪೊಲೀಸ್ ಕಮಿಷನರ್

Pinterest LinkedIn Tumblr

ಮಂಗಳೂರು : ನಿಷೇಧಿತ ಮಾದಕ ದ್ರವ್ಯಗಳ ಸೇವನೆ, ಪೂರೈಕೆಗೆ ಸಂಬಂಧಿಸಿ ಏನೇ ಮಾಹಿತಿ ಇದ್ದರೂ ಪೊಲೀಸರಿಗೆ ಮಾಹಿತಿ ನೀಡುವ ಮೂಲಕ ಸಹಕರಿಸಬೇಕು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹೇಳಿದ್ದಾರೆ.

ಡ್ರಗ್ಸ್ ವ್ಯಸನ ಮರಕ್ಕೆ ಅಂಟಿಕೊಂಡ ಗೆದ್ದಲಿನಂತೆ. ಗೆದ್ದಲು ಒಳಗೊಳಗೇ ಮರವನ್ನು ತಿನ್ನುತ್ತಾ ಸಾಗುವಂತೆ ಡ್ರಗ್ಸ್ ವ್ಯಸನವೂ ಹೊರಗಡೆ ನೋಡಲು ಸಿಗದಿದ್ದರೂ, ಅದನ್ನು ಅನುಭವಿಸಿದವರಿಗೆ ಮಾತ್ರವೇ ಗೊತ್ತಿರುತ್ತದೆ. ಡ್ರಗ್ಸ್ ವಿರುದ್ಧ ಶೂನ್ಯ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ನಗರ ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ಮಾದಕ ದ್ರವ್ಯಗಳಿಗೆ ಸಂಬಂಧಿಸಿ ಸಾಕಷ್ಟು ಪ್ರಕರಣಗಳನ್ನು ಪತ್ತೆಹಚ್ಚಿರುವುದಲ್ಲದೆ, ಪ್ರಮುಖ ಆರೋಪಿಗಳನ್ನೂ ಬಂಧಿಸಲಾಗಿದೆ. ಈ ವರ್ಷದಲ್ಲಿ ಡ್ರಗ್ಸ್ ಮಾರಾಟ, ಸೇವನೆ ಹಾಗೂ ಪೂರೈಕೆಗೆ ಸಂಬಂಧಿಸಿ 214ಕ್ಕೂ ಅಧಿಕ ಪ್ರಕರಣಗಳನ್ನು ದಾಖಲಿಸಲಾಗಿದೆ. 300ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದೆ.

ಬೆಂಗಳೂರಿನಲ್ಲಿದ್ದು ಕೊಂಡು ಡ್ರಗ್ಸ್ ವ್ಯವಹಾರ ಮಾಡುತ್ತಿದ್ದ ನೈಜೀರಿಯಾ ಪ್ರಜೆ, ಒಮನ್ ಪ್ರಜೆ ಹಾಗೂ ಕೇರಳದ ಹಲವು ಜಿಲ್ಲೆ ಹಾಗೂ ಮಂಗಳೂರಿನಲ್ಲಿ ದೊಡ್ಡ ಮಟ್ಟದಲ್ಲಿ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಕೇರಳದ ಆರೋಪಿಯನ್ನೂ ಇತ್ತೀಚೆಗೆ ಬಂಧಿಸಲಾಗಿದೆ. ಸಮಾಜವನ್ನು ಡ್ರಗ್ಸ್ ಮುಕ್ತ ಮಾಡುವಲ್ಲಿ ನಾವೆಲ್ಲಾ ಸಂಕಲ್ಪ ಮಾಡೋಣ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಕರೆ ನೀಡಿದ್ದಾರೆ.

Comments are closed.