ಕರಾವಳಿ

ಉಡುಪಿಯ ಉದ್ಯಾವರದಲ್ಲಿ ಟ್ಯಾಂಕರ್-ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಗೃಹರಕ್ಷಕ ಸಿಬ್ಬಂದಿ ಸಾವು

Pinterest LinkedIn Tumblr

ಉಡುಪಿ: ಉಡುಪಿ ರಾಷ್ಟ್ರೀಯ ಹೆದ್ದಾರಿ 66 ಉದ್ಯಾವರ ಬಲಾಯಿಪಾದೆ ಜಂಕ್ಷನ್ ಬಳಿ ಬುಧವಾರ ಮುಂಜಾನೆ ಟ್ಯಾಂಕರ್ ನ‌ ಹಿಂಬದಿಗೆ ಕಾರು ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಮೂಲ್ಕಿ ಗೃಹರಕ್ಷಕ ದಳದ ಸಿಬಂದಿ ರಾಕೇಶ್ (27) ಅವರು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಅವರು ಮಂಗಳವಾರ ರಾತ್ರಿ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಿ, ಬುಧವಾರ ಮುಂಜಾನೆ ಉಡುಪಿಯಲ್ಲಿರುವ ತಂಗಿಯ ಮನೆಗೆ ತೆರಳುತ್ತಿದ್ದಾಗ ಕಾರು ಟ್ಯಾಂಕರ್ ಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿತ್ತು.

ಢಿಕ್ಕಿಯ ರಭಸಕ್ಕೆ ತಲೆಗೆ ಗಂಭೀರ ಗಾಯಗೊಂಡಿದ್ದ ಗಾಯಾಳು ರಾಕೇಶ್ ಅವರನ್ನು ಸ್ಥಳೀಯರು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಬಳಿಕ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತ ರಾಕೇಶ್ ಅವಿವಾಹಿತರಾಗಿದ್ದರು.

Comments are closed.