ಕರಾವಳಿ

ಸಂಸದರಾದ ಶೋಭಾ ಕರಂದ್ಲಾಜೆ, ನಾರಾಯಣ ಸ್ವಾಮಿಗೆ ಕೇಂದ್ರ ಸಚಿವ ಸ್ಥಾನ‌ ಫಿಕ್ಸ್

Pinterest LinkedIn Tumblr

ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಇಂದು ಸಂಜೆ 6 ಗಂಟೆಗೆ ಪುನಾರಚನೆ ಆಗುತ್ತಿದೆ.

ಸಂಭಾವ್ಯ ಕೇಂದ್ರ ಸಚಿವರ ಪಟ್ಟಿಯ ಸಚಿವ ಸಂಪುಟ ಸ್ಥಾನದಲ್ಲಿ ಕರ್ನಾಟಕದಿಂದ ಇಬ್ಬರಿಗೆ ಸ್ಥಾನ ಸಿಗುವುದು ಖಚಿತವಾಗಿದ್ದು, ಶೋಭಾ ಕರಂದ್ಲಾಜೆ ಹಾಗೂ ನಾರಾಯಣ ಸ್ವಾಮಿ ಇಬ್ಬರೂ ಸಚಿವ ಸಂಪುಟಕ್ಕೆ ಸೇರ್ಪಡೆಯಾಗುವುದು ಖಚಿತವೆಂದು ಉನ್ನತ ಮೂಲಗಳು ಮಾಹಿತಿ ನೀಡಿವೆ.

ಕರ್ನಾಟಕದಿಂದ ಸಂಸದೆ ಶೋಭಾ ಕರಂದ್ಲಾಜೆ, ಆನೇಕಲ್​ ನಾರಾಯಣಸ್ವಾಮಿಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಕ್ಕಿರುವುದು ಪಕ್ಕಾ ಆಗಿದ್ದು ರಾಜೀವ್ ಚಂದ್ರಶೇಖರ್ ಅವರ ಹೆಸರು ಕೂಡ ಕೇಳಿಬರುತ್ತಿದೆ. ಈತನ್ಮದ್ಯೆ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

Comments are closed.