
ಬೆಂಗಳೂರು: “ನನ್ನ ಧ್ವನಿಯನ್ನು ಅನುಕರಿಸಿ ಪಕ್ಷಕ್ಕೆ ಧಕ್ಕೆ ತರುವ ಮಾದರಿಯಲ್ಲಿ ನಕಲಿ ಆಡಿಯೋ ಒಂದನ್ನು ಯಾರೋ ಕಿಡಿಗೇಡಿಗಳು ವಾಟ್ಸ್ ಆ್ಯಪ್‍ನಲ್ಲಿ ಹರಿಬಿಟ್ಟಿದ್ದು, ಇದರ ಸತ್ಯಾಸತ್ಯತೆ ಕುರಿತು ತನಿಖೆ ನಡೆಸಬೇಕು” ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ಶ್ರೀ ನಳಿನ್‍ಕುಮಾರ್ ಕಟೀಲ್ ಅವರು ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.
ಪಕ್ಷಕ್ಕೆ ಮತ್ತು ಸರಕಾರಕ್ಕೆ ಕೆಟ್ಟ ಹೆಸರು ತರುವ ದೃಷ್ಟಿಯಿಂದ ಈ ಆಡಿಯೋವನ್ನು ಹರಿಬಿಟ್ಟಿದ್ದು, ತನಿಖೆ ನಡೆಸಿದರೆ ಅದರ ನಕಲಿತನ ಸಾಬೀತಾಗಲಿದೆ. ಆದ್ದರಿಂದ ತಾವು ಅದರ ಹಿಂದಿರುವ ಕಿಡಿಗೇಡಿಗಳು ಯಾರೆಂಬ ಕುರಿತು ತನಿಖೆ ನಡೆಸಲು ಒತ್ತಾಯಿಸುತ್ತಿರುವುದಾಗಿ ಶ್ರೀ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.
Comments are closed.