ಉಡುಪಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಕುಂದಾಪುರ ಮೂಲದ ಯುವಕನ ಮೇಲೆ ಕಾರ್ಕಳ ನಗರ ಠಾಣೆಯಲ್ಲಿ ಪೋಕ್ಸೊ ಹಾಗೂ ಐಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಕುಂದಾಪುರ ತಾಲೂಕಿನ ಗುಲ್ವಾಡಿ ನಿವಾಸಿ ಇಮ್ರಾನ್ (24) ಎಂದು ಗುರುತಿಸಲಾಗಿದೆ.
12 ವರ್ಷ ಪ್ರಾಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಕುರಿತು ಉಡುಪಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ದೂರು ಬಂದ ಹಿನ್ನಲೆಯಲ್ಲಿ ಆಕೆಯ ಮನಗೆ ಭೇಟಿ ನೀಡಿ ಆಪ್ತ ಸಮಾಲೋಚನೆ ನಡೆಸಲಾಗಿತ್ತು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್ ಕಾರ್ಕಳ ನಗರ ಠಾಣೆಗೆ ದೂರು ನೀಡಿದ್ದು ಅದರಂತೆ ವೃತ್ತ ನಿರೀಕ್ಷಕರಾದ ಸಂಪತ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಉಪ ನಿರೀಕ್ಷಕ ಮಧು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಅಪ್ರಾಪ್ತ ಬಾಲಕಿಯನ್ನು ರಕ್ಷಿಸಿ ಪುನರ್ವಸತಿ ಕಲ್ಪಿಸಲು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, ಆಪ್ತಸಮಾಲೋಚಕಿ ಅಂಬಿಕಾ, ಸಾಮಾಜಿಕ ಕಾರ್ಯಕರ್ತ ಯೋಗಿಶ್, ಕಾರ್ಕಳ ನಗರ ಠಾಣಾ ಸಿಬ್ಬಂದಿಗಳಾದ ಶ್ಯಾಮ್, ರವೀಂದ್ರ ಇನ್ನಿತರರು ಸಹಕರಿಸಿದ್ದರು.
ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ರೊನಾಲ್ಡ್ ಫುರ್ಟಾಡೋ ಅವರ ಆದೇಶದಂತೆ ಅಪ್ರಾಪ್ತ ಬಾಲಕಿಗೆ ಸೂಕ್ತ ಪುನರ್ವಸತಿ ಕಲ್ಪಿಸಲಾಗಿದೆ .
Comments are closed.