ಕರಾವಳಿ

ಸಚಿವ ಕೋಟ ಶ್ರೀನಿವಾಸ ಪೂಜಾರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದಲೂ ಶುಭಾಶಯ ಕೋರಿದ ಬ್ಯಾನರ್..!

Pinterest LinkedIn Tumblr

ಕುಂದಾಪುರ: ಮೂರನೇ ಬಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಕೂಡ ಶುಭಾಶಯ ಕೋರಿದ ಬ್ಯಾನರ್ ಒಂದು ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

ಪ್ರಸ್ತುತ ರಾಜಕಾರಣದಲ್ಲಿ ಅಪರೂಪದ ಘಟನೆ ಇದಾಗಿದ್ದು ಇತ್ತೀಚೆಗಷ್ಟೇ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಸ್ವಪಕ್ಷದವರು ಮಾತ್ರವಲ್ಲದೇ, ವಿರೋಧ ಪಕ್ಷ ಕಾಂಗ್ರೆಸ್ ಕಾರ್ಯಕರ್ತರು ಅಭಿನಂದನಾ ಬ್ಯಾನರ್ ಅಳವಡಿಸುವ ಮೂಲಕ ಕೋಟ ರಾಜಕೀಯವಾಗಿ ಅಜಾತಶತ್ರು ಎಂಬುದನ್ನು ತೋರಿಸಿದ್ದಾರೆ.

 

ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಶೇಡಿಮನೆ ಗ್ರಾಮದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಅರಸಮ್ಮಕಾನು ಎಂಬಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಶುಭಾಶಯ ಕೋರುವ ಬ್ಯಾನರ್ ಅಳವಡಿಸಿದ್ದಾರೆ. ಸದ್ಯ ಈ ಬ್ಯಾನರ್​ನ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಅನ್ಯಪಕ್ಷಗಳ ಕಾರ್ಯಕರ್ತರೂ ಬಹಿರಂಗವಾಗಿ ಅಭಿಮಾನ ತೋರಿಸುತ್ತಿರುವುದು ಎಲ್ಲರ ಗಮನಸೆಳೆದಿದೆ. ಜತೆಗೆ ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ರೀತಿಯ ಚರ್ಚೆಗೆ ಕಾರಣವಾಗಿದೆ.

Comments are closed.