ಕರಾವಳಿ

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ 65 ವರ್ಷದ ವ್ಯಕ್ತಿ ಪೋಕ್ಸೋ ಕಾಯ್ದೆಯಡಿ ಬಂಧನ

Pinterest LinkedIn Tumblr

ಉಡುಪಿ: 11 ವರ್ಷ ಪ್ರಾಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ವೃದ್ಧನನ್ನು ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ಮೂಲದ ಅನಂತ ಶೇರಿಗಾರ (65) ಬಂಧಿತ ಆರೋಪಿ.

ಘಟನೆ ವಿವರ: ಮಕ್ಕಳ ಸಹಾಯವಾಣಿಗೆ ಕರೆ ಮಾಡಿದ 11 ವರ್ಷ ಪ್ರಾಯದ ಅಪ್ರಾಪ್ತ ಬಾಲಕಿ ತಾನು ಮನೆಯಲ್ಲಿದ್ದಾಗ ತನ್ನ ಮೇಲೆ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಮಾಹಿತಿ ನೀಡಿದ್ದು ಈ ಬಗ್ಗೆ ಮಕ್ಕಳ ಸಹಾಯವಾಣಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದರು. ತಕ್ಷಣ ಅಪ್ರಾಪ್ತ ಬಾಲಕಿಯ ಮನೆಗೆ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, ಸಮಾಜ ಕಾರ್ಯಕರ್ತರಾದ ಯೋಗೀಶ್ ಮತ್ತು ಸುರಕ್ಷಾ ಭೇಟಿ ನೀಡಿ ಅಪ್ರಾಪ್ತ ಬಾಲಕಿಯನ್ನು ಆಪ್ತ ಸಮಾಲೋಚನೆಗೆ ಒಳಪಡಿಸಲಾಯಿತು.

ಈ ಘಟನೆಯ ಬಗ್ಗೆ ಉಡುಪಿಯ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡುವಂತೆ ಪೋಷಕರಿಗೆ ಅರಿವು ನೀಡಿದ್ದು ಪೋಷಕರು ನೀಡಿದ ದೂರಿನಂತೆ ಮಹಿಳಾ ಠಾಣೆಯಲ್ಲಿ ವೃತ್ತ ನಿರೀಕ್ಷಕ ಜಯಂತ್ ಎಮ್. ಅವರ ಮಾರ್ಗದರ್ಶನದಲ್ಲಿ ಉಪ ನಿರೀಕ್ಷಕಿ ವೈಲೆಟ್ ಫೆಮಿನಾ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಮಹಿಳಾ ಠಾಣಾ ಸಿಬ್ಬಂದಿಗಳಾದ ಅಶೋಕ್ ಮತ್ತು ಜ್ಯೋತಿ ನಾಯಕ್ ಮತ್ತಿತರರು ಈ ಕಾರ್ಯಾಚರಣೆಯಲ್ಲಿ ಇದ್ದರು.

Comments are closed.