ಕರ್ನಾಟಕ

ತನಗೆ ನೀಡಿದ್ದ ಸಂಪುಟ ದರ್ಜೆ ಸ್ಥಾನಮಾನವನ್ನು ನಯವಾಗಿ ತಿರಸ್ಕರಿಸಿದ ಮಾಜಿ ಸಿಎಂ ಯಡಿಯೂರಪ್ಪ

Pinterest LinkedIn Tumblr

ಬೆಂಗಳೂರು: ತಮಗೆ ನೀಡಿದ್ದ ಸಂಪುಟ ದರ್ಜೆ ಸ್ಥಾನಮಾನವನ್ನು ಹಿಂದಕ್ಕೆ ಪಡೆಯಬೇಕೆಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ತಮಗೆ ಮುಖ್ಯಮಂತ್ರಿಯಾಗಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡುವಂತೆ ಆದೇಶ ಮಾಡಿದ್ದರು. ಆದರೆ ಇದಾಗಿ ಕೆಲವೇ ಗಂಟೆಯೊಳಗೆ ಸರಕಾರಿ ಆದೇಶವನ್ನು ಯಡಿಯೂರಪ್ಪ ನಯವಾಗಿಯೇ ತಿರಸ್ಕರಿಸಿದ್ದಾರೆ.

ಈ ಬಗ್ಗೆ ಭಾನುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಯಡಿಯೂರಪ್ಪ, ನಿಕಟ ಪೂರ್ವ ಮುಖ್ಯಮಂತ್ರಿಗೆ ಸರ್ಕಾರದಿಂದ ನೀಡುವ ಸೌಲಭ್ಯಗಳು ಮಾತ್ರ ನನಗೆ ಸಾಕು. ಸಂಪುಟ ದರ್ಜೆಯ ಸ್ಥಾನ ನೀಡಿ ಹೊರಡಿಸಿರುವ ಆದೇಶವನ್ನು ಹಿಂಪಡೆಯಬೇಕು ಎಂದು ಕೋರಿದ್ದಾರೆ.

 

Comments are closed.