
ಮಂಗಳೂರು : ಮಂಗಳೂರಿನಲ್ಲಿ ಶಾಶ್ವತ NIA ಕಚೇರಿ ಮತ್ತು ಸೇನಾ ನೆಲೆ ತೆರೆಯಲು ಹಾಗೂ ರಾಜ್ಯದಲ್ಲಿ ಲವ್ ಜಿಹಾದ್ ತಡೆ ಕಾನೂನು ತರುವಂತೆ ಕ್ರಮಕೈಗೊಳ್ಳಲು ಒತ್ತಾಯಿಸಿ ವಿಶ್ವ ಹಿಂದ್ ಪರಿಷತ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರಿಗೆ ಮನವಿ ನೀಡಲಾಯಿತು.
ವಿಶ್ವ ಹಿಂದ್ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್, ಜಿಲ್ಲಾಧ್ಯಕ್ಷರು ಗೋಪಾಲ್ ಕುತ್ತಾರ್, ಜಿಲ್ಲಾ ಕಾರ್ಯದರ್ಶಿ ಶಿವಾನಂದ್ ಮೆಂಡನ್, ಜಿಲ್ಲಾ ಸಂಯೋಜಕ್ ಪುನೀತ್ ಅತ್ತಾವರ ಈ ಸಂದಭದಲ್ಲಿ ಉಪಸ್ಥಿತರಿದ್ದರು.
ಬಿ ಎಂ ಇದಿನಬ್ಬ ಅವರ ಪುತ್ರನ ಮನೆಗೆ NIA ದಾಳಿ : ಇನ್ನಷ್ಟು ಹೆಚ್ಚಿನ ತನಿಖೆಗೆ ಆಗ್ರಹ :
ಇದೇ ವೇಳೆ ಉಳ್ಳಾಲದ ಮಾಜಿ ಶಾಸಕ ಬಿ ಎಂ ಇದಿನಬ್ಬ ಅವರ ಪುತ್ರ ಸಿರಿಯಾ ಮೂಲದ ಐಸಿಸ್ ಉಗ್ರ ಸಂಘಟನೆಯ ನಂಟು ಇರುವ ಶಂಕೆಯಲ್ಲಿ NIA ಅಧಿಕಾರಿಗಳು ಮತ್ತೊಮ್ಮೆ ದಾಳಿ ನಡೆಸಿ ಇನ್ನಷ್ಟು ಹೆಚ್ಚಿನ ತನಿಖೆ ನಡೆಸಬೇಕು ಮತ್ತು ಮಂಗಳೂರಿನಲ್ಲಿ ಶಾಶ್ವತವಾಗಿ NIA ಕಚೇರಿಯನ್ನು ಸ್ಥಾಪಿಸ ಬೇಕು ಎಂದು ಬಜರಂಗದಳವು ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದೆ.
ಉಳ್ಳಾಲದ ಮಾಜಿ ಶಾಸಕ ಬಿ ಎಂ ಇದಿನಬ್ಬ ಅವರ ಪುತ್ರ ಸಿರಿಯಾ ಮೂಲದ ಐಸಿಸ್ ಉಗ್ರ ಸಂಘಟನೆಯ ನಂಟು ಇರುವ ಶಂಕೆಯಲ್ಲಿ NIA ಅಧಿಕಾರಿಗಳು ದಾಳಿ ನಡೆಸಿರುವುದು ಇಡೀ ಜಿಲ್ಲೆ ಆತಂಕಕ್ಕೆ ಒಳಗಾಗಿದೆ ತಕ್ಷಣ ಇದರ ಬಗ್ಗೆ ಇನ್ನಷ್ಟು ಹೆಚ್ಚಿನ ತನಿಖೆ ನಡೆಸಬೇಕು.
ಅಲ್ಲದೆ ಮಂಗಳೂರಿನಲ್ಲಿ ಕಳೆದ ಡಿಸೆಂಬರ್ ತಿಂಗಳಿನಲ್ಲಿ ಉಗ್ರರ ಪರ ಗೋಡೆಬರಹ ಬರೆದ ಶಂಕಿತ 3 ಉಗ್ರರ ಬಂಧನವಾಗಿತ್ತು ಆ ಸಮಯದಲ್ಲಿ ಮಂಗಳೂರಿನಲ್ಲಿ ಶಾಶ್ವತವಾಗಿ NIA ಕಚೇರಿಯನ್ನು ಸ್ಥಾಪಿಸಲು ಕೇಂದ್ರ ಸರಕಾರಕ್ಕೆ ಮನವಿ ಮಾಡಿದ್ದೆವು.
ಕೇಂದ್ರ ಸರಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಜಾಗತಿಕ ಮಟ್ಟದಲ್ಲಿ ಬೇರೂರಿರುವ ಭಯೋತ್ಫಾದನೆ ಚಟುವಟಿಕೆಯು ಕರಾವಳಿ ಜಿಲ್ಲೆಗಳಲ್ಲಿ ನೆಲೆಕಾಣಲು ಪ್ರಯತ್ನಿಸುತ್ತಿರುವುದಕ್ಕೆ ಇದು ಸಾಕ್ಷಿಯಾಗಿದ್ದು ಇದನ್ನು ಸರಿಯಾಗಿ ತನಿಖೆ ನಡೆಸಲು ಮತ್ತು ಮಂಗಳೂರಿನಲ್ಲಿ ಶಾಶ್ವತವಾಗಿ NIA ಕಚೇರಿಯನ್ನು ಸ್ಥಾಪಿಸಲು ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಬಜರಂಗದಳ ಜಿಲ್ಲಾ ಸಂಚಾಲಕ್ ಪುನೀತ್ ಅತ್ತಾವರ ತಿಳಿಸಿದ್ದಾರೆ.
Comments are closed.