ಕರ್ನಾಟಕ

ಸರಕಾರಿ ಕಾರ್ಯಕ್ರಮಗಳಲ್ಲಿ ಹಾರ, ತುರಾಯಿ ಬೇಡವೆಂದು ಸರಕಾರದ ಆದೇಶ: ಕನ್ನಡ ಪುಸ್ತಕ ನೀಡಲು ಸಮ್ಮತಿ

Pinterest LinkedIn Tumblr

ಬೆಂಗಳೂರು: ರಾಜ್ಯ ಸರ್ಕಾರದ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ, ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ನೀಡದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ, ಪೇಟ, ಶಾಲು ಸೇರಿದಂತೆ ಅನಗತ್ಯ ಖರ್ಚುಗಳಿಗೆ ರಾಜ್ಯ ಸರ್ಕಾರ ಕಡಿವಾಣ ಹಾಕಲು ತೀರ್ಮಾನಿಸಿ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ, ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ನೀಡದಂತೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟಿಸಲಾಗಿದೆ.

ಆದೇಶ ಪ್ರಕಟಿಸಿದ ಸಿ.ಎಸ್.
ಸಭೆಯೊಂದಕ್ಕೆ ಬಂದಿದ್ದ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಈ ಆದೇಶವನ್ನು ಮೌಖಿಕವಾಗಿ ಹೇಳಿದ್ದು ತಕ್ಷಣ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರು ಸರ್ಕಾರಿ ಆದೇಶ ಜಾರಿ ಮಾಡಿದರು. ಇನ್ನು ಮುಂದೆ ಹೂ ಗುಚ್ಚದ ಬದಲಿಗೆ ಕನ್ನಡ ಪುಸ್ತಕಗಳನ್ನು ಕಾಣಿಕೆಯಾಗಿ ನೀಡಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Comments are closed.