ಕರಾವಳಿ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು: 115 ಕೋಟಿಯ ಜಿಲ್ಲಾಸ್ಪತ್ರೆ ಕಟ್ಟಡ ಶಂಕುಸ್ಥಾಪನೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ

Pinterest LinkedIn Tumblr

ಉಡುಪಿ: ಉಡುಪಿ ಜಿಲ್ಲೆಗೆ ಆದ್ಯತೆಯಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಮಂಜೂರು ಮಾಡಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಅವರು ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಆವರಣದಲ್ಲಿ, ರೂ.115 ಕೋಟಿ ವೆಚ್ಚದ , 250 ಹಾಸಿಗೆಗಳ ಜಿಲ್ಲಾಸ್ಪತ್ರೆಯ ನೂತನ ಕಟ್ಟಡದ ಶಂಕುಸ್ಥಾಪನೆಯನ್ನು ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ನೆರವೇರಿಸಿ ಮಾತನಾಡಿದರು.

ರಾಜ್ಯದಲ್ಲಿ ಪಿಪಿಪಿ ಮಾದರಿಯಲ್ಲಿ ವೈದ್ಯಕೀಯ ಕಾಲೇಜುಗಳನ್ನು ನಿರ್ಮಾಣ ಮಾಡುತ್ತಿದ್ದು, ಇದರಲ್ಲಿ ಉಡುಪಿ ಜಿಲ್ಲೆಗೆ ಆದ್ಯತೆಯಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಮಂಜೂರು ಮಾಡಲಾಗುವುದು ಎಂದ ಮುಖ್ಯಮಂತ್ರಿಗಳು, ಉಡುಪಿ ಜಿಲ್ಲೆಗೆ ಆರೋಗ್ಯ ಚಿಕಿತ್ಸೆಗಾಗಿ ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಿಂದ ಸಾರ್ವಜನಿಕರು ಆಗಮಿಸುತ್ತಿದ್ದು, ಜಿಲ್ಲೆಯಲ್ಲಿ ಒಂದು ಖಾಸಗಿ ವೈದ್ಯಕೀಯ ಕಾಲೇಜು ಮಾತ್ರವಿದ್ದು, ಸರಕಾರಿ ವೈದ್ಯಕೀಯ ಕಾಲೇಜಿನ ಅತ್ಯಂತ ಅವಶ್ಯಕವಾಗಿ ಬೇಕಿದೆ ಎಂದರು.

ಕೋವಿಡ್ ಮೊದಲನೇ ಮತ್ತು ಎರಡನೇ ಅಲೆಯನ್ನು ಸರಕಾರವು ಯಶಸ್ವಿಯಾಗಿ ಎದುರಿಸಿದ್ದು, 25000 ಹೊಸ ಆಕ್ಸಿಜಿನ್ ಬೆಡ್‍ಗಳು, 6000 ವೆಂಟಿಲೇಟರ್ ಬೆಡ್‍ಗಳು, ರಾಜ್ಯದ ಎಲ್ಲಾ ತಾಲೂಕುಗಳಲ್ಲಿ ಹೆಚ್ಚುವರಿ ಬೆಡ್‍ಗಳ ವ್ಯವಸ್ಥೆ, ಕೋವಿಡ್ ಕೇರ್ ಸೆಂmರ್‍ಗಳು, ಆಕಿಜಿನ್ ಪ್ಲಾಂಟ್‍ಗಳ ನಿರ್ಮಾಣ, ಕೋವಿಡ್ ಲಸಿಕೆಗಳ ವಿತರಣೆ ಮಾಡಲಾಗಿದೆ. ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡಿದ್ದು, ರಾಜ್ಯದ ಜನತೆಯ ಆರೋಗ್ಯ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದರು.

ಉಡುಪಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ಸಂಪೂರ್ಣವಾಗಿ ಸರಕಾರವೇ ನಡೆಸುವ ಕುರಿತಂತೆ ಒಂದು ವಾರದಲ್ಲಿ ಸ್ಪಷ್ಟ ಆದೇಶ ಮಾಡಲಾಗುವುದು ಎಂದ ಮುಖ್ಯಮಂತ್ರಿಗಳು, ಉಡುಪಿ ನಗರದ ಯುಜಿಡಿ ಕಾಮಗಾರಿ ಕುರಿತಂತೆ ಒಳಚರಂಡಿ ಮಂಡಳಿಯ ಸಭೆಯಲ್ಲಿ ಶೀಘ್ರದಲ್ಲಿ ಅನುಮೋದನೆ ದೊರಕಿಸಲಾಗುವುದು ಎಂದರು.

ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದಾಗ ಜಿಲ್ಲೆಗೆ ಕೋವಿಡ್ ಲ್ಯಾಬ್ ಮಂಜೂರು, ಅದರ ಸಾಮಥ್ರ್ಯ ಹೆಚ್ಚಳ, ನಿರಂತರವಾಗಿ ಜಿಲ್ಲೆಗೆ ಆಕ್ಸಿಜಿನ್ ಸರಬರಾಜು, ವಿದೇಶದಿಂದ ಬರುವ ಆಕ್ಸಜಿನ್‍ನಲ್ಲಿ ಸಹ ಜಿಲ್ಲೆಗೆ ಹೆಚ್ಚು ಪ್ರಾಧಾನ್ಯತೆ ನೀಡುವ ಮೂಲಕ ಜಿಲ್ಲೆಯಲ್ಲಿ ಆಕ್ಸಿಜಿನ್ ಕೊರತೆ ಉಂಟಾಗದಂತೆ ನೋಡಿಕೊಳ್ಳಲಾಗಿದೆ, ಜಿಲ್ಲೆಯಲ್ಲಿ ಆಕ್ಸಿಜಿನ್ ಪ್ಲಾಂಟ್‍ಗಳ ನಿರ್ಮಾಣ ಮಾಡಲಾಗಿದೆ ಎಂದರು.

ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ವೈದ್ಯಕೀಯ ಶಿಕ್ಷಣ ಸಚಿವ ಡಾ|| ಕೆ.ಸುಧಾಕರ್, ಮಾತನಾಡಿ ಕೋವಿಡ್ ಮೂರನೆ ಅಲೆಯನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಅಲ್ಲಿನ ಅವಶ್ಯಕತೆಗಳನ್ನು ಪರೀಶೀಲಿಸಲಾಗುತ್ತಿದೆ. ರಾಜ್ಯದ ಜನತೆಯ ಆರೋಗ್ಯ ದೃಷ್ಟಿಯಿಂದ 4,000 ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗಿದೆ, ನೇರ ನೇಮಕಾತಿ ಮೂಲಕ 1,740 ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಮೂರನೇ ಅಲೆಯ ಮುನ್ನೆಚ್ಚರಿಕಾ ಕ್ರಮವಾಗಿ , ಮಕ್ಕಳ ಅರೋಗ್ಯ ತಪಾಸಣೆಯ ವಾತ್ಸಲ್ಯ ಕಾರ್ಯಕ್ರಮವನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದರು.

ಉಡುಪಿ ಶಾಸಕ ರಘುಪತಿ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಚಿವ ವಿ.ಸುನೀಲ್ ಕುಮಾರ್, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, , ಲಾಲಾಜಿ ಆರ್ ಮೆಂಡನ್, ಬಿ.ಎಂ.ಸುಕುಮಾರ ಶೆಟ್ಟಿ, ಉಡುಪಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎ.ರಾಘವೇಂದ್ರ ಕಿಣಿ, ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್ , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಡಾ. ತ್ರಿಲೋಕ ಚಂದ್ರ, ಜಿಲ್ಲಾಧಿಕಾರಿ ಜಿ.ಜಗದೀಶ್ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಎಸ್ಪಿ ವಿಷ್ಣುವರ್ಧನ್ ಉಪಸ್ಥಿತರಿದ್ದರು.

Comments are closed.