ಕರ್ನಾಟಕ

ಕರ್ನಾಟಕದ ನ್ಯಾಯಮೂರ್ತಿ ನಾಗರತ್ನ ಬಿ.ವಿ ಸೇರಿ 9 ಮಂದಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಪ್ರಮಾಣವಚನ

Pinterest LinkedIn Tumblr

ನವದೆಹಲಿ : ಸರ್ವೋಚ್ಚ ನ್ಯಾಯಾಲಯಕ್ಕೆ ನ್ಯಾಯಮೂರ್ತಿಯಾಗಿ ಇತ್ತೀಚೆಗಷ್ಟೇ ನೇಮಕವಾಗಿದ್ದ ಕರ್ನಾಟಕ ರಾಜ್ಯ ಹೈಕೋರ್ಟ್ ನಲ್ಲಿ ನ್ಯಾಯಾಧೀಶರಾಗಿದ್ದ ನಾಗರತ್ನ ಬಿ.ವಿ. ಅವರನ್ನು ಒಳಗೊಂಡು ಮೂವರು ಮಹಿಳಾ ನ್ಯಾಯಮೂರ್ತಿಗಳೂ ಸೇರಿ ಒಂಬತ್ತು ಮಂದಿ ನ್ಯಾಯಮೂರ್ತಿಗಳು ಮಂಗಳವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.

ನ್ಯಾಯಮೂರ್ತಿ ಎ.ಎಸ್. ಓಕಾ, ನ್ಯಾಯಮೂರ್ತಿ ವಿಕ್ರಮ್ ನಾಥ್, ನ್ಯಾಯಮೂರ್ತಿ ಜೆ.ಕೆ. ಮಹೇಶ್ವರಿ, ನ್ಯಾಯಮೂರ್ತಿ ಹಿಮಾ ಕೊಹ್ಲಿ, ನ್ಯಾಯಮೂರ್ತಿ ಸಿ.ಟಿ. ರವೀಂದ್ರಕುಮಾರ್, ನ್ಯಾಯಮೂರ್ತಿ ಎಂ.ಎಂ. ಸುಂದರೇಶ್ ಮತ್ತು ನ್ಯಾಯಮೂರ್ತಿ ಬೇಲಾ ತ್ರಿವೇದಿ, ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಅವರು ಇಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಸುಪ್ರೀಂ ಕೋರ್ಟ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಹೊಸದಾಗಿ ಸುಪ್ರೀಂ ಕೋರ್ಟ್ ಗೆ ನೇಮಕಗೊಂಡ ನ್ಯಾಯಮೂರ್ತಿಗಳಿಗೆ ಪ್ರಮಾಣವಚನ ಬೊಧಿಸಿದ್ದಾರೆ.

ಜಸ್ಟೀಸ್​ ಬಿ.ವಿ. ನಾಗರತ್ನ ಅವರು 2027ರಲ್ಲಿ ದೇಶದ ಪರಮೋಚ್ಛ ನ್ಯಾಯಾಲಯದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿ ಹೊಸ ಇತಿಹಾಸ ಸೃಷ್ಠಿಸುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಲಾಗುತ್ತಿದೆ.

Comments are closed.