ಕರ್ನಾಟಕ

ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ: ಅಮಿತ್‌ ಶಾ

Pinterest LinkedIn Tumblr

ದಾವಣಗೆರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉತ್ತಮವಾಗಿ ಕೆಲಸ ಮಾಡುತ್ತಿರುವುದನ್ನು ಕೇಂದ್ರ ಕೂಡ ಗಮನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

ದಾವಣಗೆರೆಯಲ್ಲಿ 3 ಕೋಟಿ ರೂ. ವೆಚ್ಚದ ಗಾಂಧಿ ಭವನ, 15 ಕೋಟಿ ರೂ. ವೆಚ್ಚದ ಪೊಲೀಸ್‌ ಪಬ್ಲಿಕ್‌ ವಸತಿ ಶಾಲೆ, 15 ಕೋಟಿ ರೂ. ವೆಚ್ಚದ ಪೊಲೀಸ್‌ ಕ್ವಾರ್ಟರ್ಸ್‌ಗಳನ್ನು ವರ್ಚುವಲ್‌ ಮೂಲಕ ಉದ್ಘಾಟಿಸಿ, ಜಿಎಂಐಟಿ ಕೇಂದ್ರ ಗ್ರಂಥಾಲಯಕ್ಕೆ ಚಾಲನೆ ನೀಡಿ ಮಾತನಾಡಿದರು.

ಮುಂದಿನ 2023ರ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. ಬಿ.ಎಸ್‌ ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಸರಕಾರ ಉತ್ತಮ ಕೆಲಸ ಮಾಡಿತ್ತು. ಯಡಿಯೂರಪ್ಪ ಸ್ವಯಂ ನಿರ್ಧಾರ ಮಾಡಿ ಸಿಎಂ ಸ್ಥಾನ ತ್ಯಜಿಸಿದರು. ಬೊಮ್ಮಾಯಿ ಅವರು ಸಿಎಂ ಆಗಿ ಅಭಿವೃದ್ಧಿ ವಿಷಯದಲ್ಲಿ ಸಮಯೋಚಿತವಾಗಿ ಉತ್ತಮ ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಿದರು.

ಭಾರತ ಸೇರಿದಂತೆ ವಿಶ್ವವನ್ನೇ ಕಾಡಿದ ಕೊರೊನಾವನ್ನು ನಿಯಂತ್ರಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಯಶಸ್ವಿಯಾಗಿ ಕಾರ್ಯನಿರ್ವಹಿಸಿದೆ. ದೇಶದ ಎಲ್ಲಾ ರಾಜ್ಯಗಳು ಪ್ರಧಾನಿ ಮೋದಿ ಅವರ ಹೆಗಲಿಗೆ ಹೆಗಲುಕೊಟ್ಟು ಕೊರೋನಾ ಹೋರಾಟದಲ್ಲಿ ಯಶಸ್ವಿಯಾಗಿದ್ದಾರೆ. ಕೆಲವರ ಕೊರೋನಾ ತ್ಯಾಗವನ್ನು ದೇಶ ಸ್ಮರಿಸುತ್ತದೆ. ಬಡವರು, ಅಲೆಮಾರಿಗಳು, ನಿರ್ಗತಿಕರು, ದಲಿತರು, ಆದಿವಾಸಿಗಳ ಸಹಿತ ಸಂಕಷ್ಟಕ್ಕೆ ಸಿಲುಕಿದ್ದ ಎಲ್ಲರ ನೆರವಿಗೆ ಸರ್ಕಾರ ಬಂದಿದೆ. ಸೆಪ್ಟೆಂಬರ್ ಅಂತ್ಯದ ವೇಳೆಗೆ ಕರ್ನಾಟದಲ್ಲಿ ಶೇ.90ರಷ್ಟು ಲಸಿಕೆ ಹಾಕಲಾಗುವುದು. ಲಸಿಕೆಯಿಂದ ದೂರವುಳಿದವರನ್ನು ಲಸಿಕಾ ಕೇಂದ್ರಕ್ಕೆ ಕರೆದೊಯ್ದು ಲಸಿಕೆ ಹಾಕಿಸಲು ಬಿಜೆಪಿಗರು ಮುಂದಾಗಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಬೃಹತ್‌ ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿ, ಕೃಷಿ ಸಚಿವ ಬಿಸಿ ಪಾಟೀಲ್‌, ಪ್ರವಾಸೋದ್ಯಮ ಸಚಿವ ಆನಂದ ಸಿಂಗ್, ಸಂಸದ ಜಿಎಂ ಸಿದ್ದೇಶ್ವರ, ಶಾಸಕರಾದ ಎಸ್‌ಎ ರವೀಂದ್ರನಾಥ, ಮಾಡಾಳ್ ವಿರೂಪಾಕ್ಷಪ್ಪ, ಎಂಪಿ ರೇಣುಕಾಚಾರ್ಯ, ಎಸ್‌ವಿ ರಾಮಚಂದ್ರಪ್ಪ, ಪ್ರೊ ಎನ್‌ ಲಿಂಗಣ್ಣ, ಕೊಂಡಜ್ಜಿ ಮೋಹನ್‌, ಕರುಣಾಕರ ರೆಡ್ಡಿ ಇದ್ದರು.

Comments are closed.