ಬೆಂಗಳೂರು: ಕೊರೋನಾ ನಡುವೆ ಸಾರ್ವಜನಿಕ ಗಣೇಶೋತ್ಸವ ಆಚರಣೆಯು ಹೇಗಿರಬೇಕು ಎನ್ನುವ ಬಗ್ಗೆ ಸರ್ಕಾರ ನಿರ್ಧಾರ ಪ್ರಕಟಿಸಿದೆ. ಇಂದು ತಜ್ಞರ ಜೊತೆ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಿದ್ದಾರೆ.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಅಶೋಕ್, ಗಣೇಶ ಮೂರ್ತಿಯನ್ನು ಐದು ದಿನದೊಳಗೆ ವಿಸರ್ಜನೆ ಮಾಡಬೇಕು. ನಗರಗಳಲ್ಲಿ ವಾರ್ಡ್ ಗೆ ಒಂದು ಮಾತ್ರ ಗಣೇಶ ಮೂರ್ತಿ ಇಡಬಹುದು. ಹಳ್ಳಿಗಳಷ್ಟು ಸ್ಥಳಿಯಾಡಳಿತದ ಅನುಮತಿಯ ಮೇರೆಗೆ ಮೂರ್ತಿ ಪ್ರತಿಷ್ಠೆ ಮಾಡಬೇಕು ಎಂದರು.
ಕೋವಿಡ್ ಪಾಸಿಟಿವಿಟಿ ರೇಟ್ ಶೇ.2ಕ್ಕಿಂತ ಕಡಿಮೆ ಇದ್ದಲ್ಲಿ ಮಾತ್ರ ಅವಕಾಶ ನೀಡಲಾಗುವುದು. ಪಾಸಿಟಿವಿಟಿ ದರ ಶೇ.2ಕ್ಕಿಂತ ಹೆಚ್ಚಿರುವ ಕಡೆಗಳಲ್ಲಿ ಗಣೇಶೋತ್ಸವ ನಡೆಸಲು ಅವಕಾಶ ನೀಡುವುದಲ್ಲ. ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಸ್ಥಳಗಳಲ್ಲಿ ಕೋವಿಡ್ ಲಸಿಕಾ ಕ್ಯಾಂಪ್ ನಡೆಸಲಾಗುವುದು. 50 ಅಡಿಗಿಂತ ಹೆಚ್ಚು ಪೆಂಡಾಲ್ ಹಾಕುವಂತಿಲ್ಲ ಎಂದು ಅಶೋಕ್ ಹೇಳಿದರು.
Comments are closed.