ಪ್ರಮುಖ ವರದಿಗಳು

ಉತ್ತರಪ್ರದೇಶ ಚುನಾವಣೆ ಹಿನ್ನೆಲೆ ಸಹ ಪ್ರಭಾರಿ ಆಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇಮಕ

Pinterest LinkedIn Tumblr

ನವದೆಹಲಿ: 2022ರಲ್ಲಿ ಉತ್ತರ ಪ್ರದೇಶ ರಾಜ್ಯದಲ್ಲಿ
ವಿಧಾನಸಭಾ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ಚುನಾವಣೆಗೆ ಸಿದ್ಧತೆ ನಡೆಸುತ್ತಿದೆ. ಹಾಗೆಯೇ ಚುನಾವಣೆಯಲ್ಲಿ ಗೆಲ್ಲುವ ಸಲುವಾಗಿ ಬಿಜೆಪಿ ಪ್ರಭಾರಿಗಳನ್ನು ಹಾಗೂ ಸಹ ಪ್ರಭಾರಿಗಳನ್ನು ನೇಮಕ ಮಾಡಿ ಆದೇಶ ಮಾಡಿದೆ.

ಧರ್ಮೇಂದ್ರ ಪ್ರಧಾನ ಅವರನ್ನು ಚುನಾವಣೆ ಪ್ರಭಾರಿ ಆಗಿ ನೇಮಕ ಮಾಡಿದ್ದು, ಶೋಭಾ ಕರಂದ್ಲಾಜೆ ಸೇರಿದಂತೆ 7 ಮಂದಿಯನ್ನು ಸಹ ಪ್ರಭಾರಿಗಳಾಗಿ ನೇಮಕ ಮಾಡಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್​ ಆದೇಶ ಹೊರಡಿಸಿದ್ದಾರೆ.

ಕೇಂದ್ರ ಕೃಷಿ ಸಹಾಯಕ ಸಚಿವೆ ಆಗಿರುವ ಶೋಭಾ ಕರಂದ್ಲಾಜೆ ಅವರನ್ನು ಚುನಾವಣೆ ಸಹ ಪ್ರಭಾರಿ ಆಗಿ ನೇಮಕ ಮಾಡಿದ್ದಾರೆ. ಇತ್ತೀಚೆಗಷ್ಟೇ ಶೋಭಾ ಕರಂದ್ಲಾಜೆ ಕೇಂದ್ರ ಸಚಿವ ಸಂಪುಟ ಸೇರ್ಪಡೆಯಾಗಿದ್ದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 403 ಸ್ಥಾನಗಳ ಪೈಕಿ 315 ಸ್ಥಾನಗಳನ್ನು ಗೆದ್ದು ದಾಖಲೆ ಮೂಲಕ ಅಧಿಕಾರ ಹಿಡಿದಿತ್ತು.

Comments are closed.