ಕರ್ನಾಟಕ

ಚಿಂತಾಮಣಿಯಲ್ಲಿ ಸಿಮೆಂಟ್ ಲಾರಿ, ಜೀಪ್ ನಡುವೆ ಭೀಕರ ಅಪಘಾತ; 7 ಮಂದಿ ದುರ್ಮರಣ, ಹಲವರು‌ ಗಂಭೀರ

Pinterest LinkedIn Tumblr

ಚಿಕ್ಕಬಳ್ಳಾಪುರ: ಜೀಪ್ ಮತ್ತು ಕ್ಯಾಂಟರ್​ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ದುರ್ಮರಣಕ್ಕೀಡಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮದಿನಾಯಕನಹಳ್ಳಿ ಬಳಿ ನಡೆದಿದೆ.

ಸಿಮೆಂಟ್ ಸಾಗಾಟದ ಲಾರಿ ಹಾಗೂ ಜೀಪ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಸ್ಥಳದಲ್ಲಿ ಮಾಲೂರು ಶಾಸಕ ಕೆ.ವೈ. ನಂಜೇಗೌಡರಿಂದ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ‌ ಮಾನವೀಯತೆ ಮೆರೆದರು. ಶಾಸಕರು ರಸ್ತೆ ಮಾರ್ಗವಾಗಿ ಹೋಗುತ್ತಿದ್ದರು. ಅಪಘಾತ ಕಂಡು ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದಾರೆ.

ಲಾರಿ ಹಾಗೂ ಜೀಪ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಚಿಕ್ಕಬಳ್ಳಾಪುರ ಎಸ್​ಪಿ ಜಿ.ಜೆ. ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ. ಅಪಘಾತ ಆದ ಜೀಪ್‌ನಲ್ಲಿ 14 ಪ್ರಯಾಣಿಕರು ಇದ್ದು ಏಳು ಮಂದಿ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಜೀರೋ ಟ್ರಾಫಿಕ್‌ನಲ್ಲಿ ಕೋಲಾರಕ್ಕೆ ರವಾನೆ ಮಾಡಲಾಗಿದೆ. ಘಟನೆಯ ತೀವ್ರತೆಗೆ ಜೀಪ್ ನಜ್ಜುಗುಜ್ಜಾಗಿದೆ.

ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು‌ ಪ್ರಕರಣ ದಾಖಲಾಗಿದೆ.

Comments are closed.