ಕರ್ನಾಟಕ

‘ಸಿದ್ದು, ಡಿಕೆಶಿಯ ಕಲಹದ ಬಂಡಿ’ ಎಂದು ಬಿಜೆಪಿ ವ್ಯಂಗ್ಯ..!

Pinterest LinkedIn Tumblr

ಬೆಂಗಳೂರು: ಬೆಲೆ ಏರಿಕೆ ಖಂಡಿಸಿ ವಿಧಾನ ಸೌಧದಲ್ಲಿ ಉಭಯ ಸದನಗಳ ಕಲಾಪದಲ್ಲಿ ಭಾಗವಹಿಸಲು ಕಾಂಗ್ರೆಸ್ ನಾಯಕರು ಎತ್ತಿನ ಗಾಡಿಯಲ್ಲಿ ಆಗಮಿಸಿದ್ದರು. ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ರಾಮಲಿಂಗಾ ರೆಡ್ಡಿ ಸಹಿತ ಕೈ ನಾಯಕರು ಎತ್ತಿನ ಗಾಡಿಯನ್ನು ಏರಿ ವಿಧಾನಸೌಧ ಚಲೋ ನಡೆಸಿದ್ದರು.

ಈ ವಿಚಾರದ ಕುರಿತು ಆಡಳಿತ ಪಕ್ಷ ಬಿಜೆಪಿ, ‘ಎತ್ತಿನಗಾಡಿ ಪ್ರತಿಭಟನೆ ಮಾಡಲು ಹೊರಟಿರುವ ಕರ್ನಾಟಕ ಕಾಂಗ್ರೆಸ್ ಪಕ್ಷದ ಎತ್ತುಗಳು ಪರಸ್ಪರ ವಿರುದ್ಧ ದಿಕ್ಕಿಗೆ ಎಳೆಯುತ್ತಿವೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಈ ಹೋರಾಟದಲ್ಲಿ ಪಾಲ್ಗೊಳ್ಳಲು ಆಹ್ವಾನವನ್ನೇ ನೀಡಿರಲಿಲ್ಲ. ಇದು ಸಿದ್ದು & ಡಿಕೆಶಿ ಕಲಹದ ಬಂಡಿ’ ಎಂದು ಲೇವಡಿ ಮಾಡಿದೆ.

ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ನಂತರ ಇದು ಚೊಚ್ಚಲ ಅಧಿವೇಶನವಾಗಿದ್ದು, ಆರಂಭದಲ್ಲಿಯೇ ಪ್ರತಿಭಟನೆಯ ಬಿಸಿ ಎದುರಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ, ಪ್ರವಾಹ ಸಂತ್ರಸ್ತರಿಗೆ ಪರಿಹಾರ ವಿಳಂಬ, ವರ್ಗಾವಣೆ ದಂಧೆ, ಕೋವಿಡ್ ನಿರ್ವಹಣೆ, ಲಸಿಕೆ ಪೂರೈಕೆಯಲ್ಲಿ ವ್ಯತ್ಯಯ, ರಾಷ್ಟ್ರೀಯ ಶಿಕ್ಷಣ ನೀತಿ ಮುಂತಾದ ವಿಷಯಗಳಿಗೆ ಸಂಬಂಧಿಸಿದಂತೆ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು, ತರಾಟೆಗೆ ತೆಗೆದುಕೊಳ್ಳಲು ಕಾಂಗ್ರೆಸ್ ಸಜ್ಜಾಗಿದೆ.

 

Comments are closed.