ಕರ್ನಾಟಕ

ರಾಜಕಾರಣದಲ್ಲಿ ‘ಅಜಾತಶತ್ರು’ವಾಗಿದ್ದ ಆಸ್ಕರ್‌ ಫೆರ್ನಾಂಡಿಸ್‌ ಅಂತಿಮ ದರ್ಶನ ಪಡೆದ ರಾಹುಲ್‌ ಗಾಂಧಿ

Pinterest LinkedIn Tumblr

ಬೆಂಗಳೂರು: ಕಾಂಗ್ರೆಸ್‌ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ಅವರ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಲು ರಾಹುಲ್‌ ಗಾಂಧಿ ಬೆಂಗಳೂರಿಗೆ ಆಗಮಿಸಿದ್ದರು. ಬೆಂಗಳೂರಿನಲ್ಲಿ ಅವರು ಆಸ್ಕರ್‌ ಫೆರ್ನಾಂಡಿಸ್‌ ಅವರ ಅಂತಿಮ ದರ್ಶನ ಪಡೆದರು.

 

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಹಿರಿಯ ಮುಖಂಡರಾದ ಪರಮೇಶ್ವರ್‌‌, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್‌ ನಾಯಕರು ಸ್ವಾಗತಿಸಿದರು. ಬಳಿಕ ವಿಮಾಣ ನಿಲ್ದಾಣದಿಂದ ಪಕ್ಷದ ನಾಯಕರು ಕೆಪಿಸಿಸಿ ಕಚೇರಿಯತ್ತ ತೆರಳಿದರು.

ಬೆಂಗಳೂರಿನ ಕ್ವೀನ್ಸ್‌ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಇರಿಸಲಾಗಿದ್ದ ಆಸ್ಕರ್ ಫೆರ್ನಾಂಡಿಸ್‌ ಅವರ ಪಾರ್ಥೀವ ಶರೀರಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ ವೇಣು ಗೋಪಾಲ್‌‌, ಕರ್ನಾಟಕದಲ್ಲಿ ಕಾಂಗ್ರೆಸ್‌ ಉಸ್ತುವಾರಿ ವಹಿಸಿರುವ ರಣದೀಪ್‌ ಸಿಂಗ್‌ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌‌‌ ಹಾಗೂ ಮತ್ತಿತರರು ಅಂತಿಮ ನಮನ ಸಲ್ಲಿಸಿದರು.

Comments are closed.