ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶನಿವಾರ ರಾತ್ರಿ ವೀಕೆಂಡ್ ಪಾರ್ಟಿ ಜೋರಾಗಿ ನಡೆದಿದೆ.

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಬಳಿಯ ಖಾಸಗಿ ರೆಸಾರ್ಟ್‌ನ ನಿರ್ಜನ ಪ್ರದೇಶದಲ್ಲಿ ತಡ ರಾತ್ರಿ 30-40 ಜನರು ರೇವ್ ಪಾರ್ಟಿ ಮಾಡಿದ್ದಾರೆ. ರೇವ್ ಪಾರ್ಟಿ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರ ದಾಳಿ ನಡೆಸಿದ್ದು ಡ್ರಗ್ಸ್ ನಶೆಯಲ್ಲಿ ತೇಲುತ್ತಿದ್ದ ಯುವಕ, ಯುವತಿಯರು ಪೊಲೀಸರು ದಾಳಿ ಮಾಡುತ್ತಿದ್ದಂತೆ ಪರಾರಿಯಾಗಿದ್ದಾರೆ. ಈ ಪೈಕಿ ಸದ್ಯ ಡ್ರಗ್ಸ್ ನಶೆಯಲ್ಲಿದ್ದ 28 ಜನರನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹಾಗೂ 16 ದ್ವಿಚಕ್ರ ವಾಹನ, 7 ಕಾರು ಸೀಜ್ ಮಾಡಿಲಾಗಿದೆ.
ಇನ್ನು ರೇವ್ ಪಾರ್ಟಿಯಲ್ಲಿ ಗಾಂಜಾ ಸೇರಿದಂತೆ ವಿವಿಧ ಡ್ರಗ್ಸ್ ಗಳನ್ನು ಬಳಸಲಾಗಿತ್ತೆಂಬ ಮಾಹಿತಿಯಿದರ. ರೇವ್ ಪಾರ್ಟಿಯ ಡ್ರಗ್ಸ್ ಜಾಲದಲ್ಲಿ ವಿದ್ಯಾರ್ಥಿಗಳು, ಶ್ರೀಮಂತರ ಮಕ್ಕಳು ಭಾಗಿಯಾಗಿದ್ದಾರೆ. ಮ್ಯೂಸಿಕ್ ಕಂಪನಿಯೊಂದು ಈ ಪಾರ್ಟಿ ಆಯೋಜಿಸಿತ್ತು. ಪಾರ್ಟಿಯಲ್ಲಿದ್ದವರಲ್ಲಿ ಬಹುತೇಕರು ಹೊರರಾಜ್ಯದವರು ಎಂದು ತಿಳಿದು ಬಂದಿದೆ. ಕೇರಳ, ಉತ್ತರ ಪ್ರದೇಶ ಮೂಲದವರು ಭಾಗಿ ಮಾಹಿತಿ ಸಿಕ್ಕಿದ್ದು ರಾಜ್ಯದ ಕೆಲ ವಿದ್ಯಾರ್ಥಿಗಳು ಸೇರಿದಂತೆ ಕನ್ನಡದವರು ಕೂಡ ಪಾರ್ಟಿಯಲ್ಲಿ ಭಾಗಿಯಾಗಿದ್ರು ಎಂಬ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ.
ರೆಸಾರ್ಟ್ ಸಮೀಪ ನಿರ್ಜನ ಪ್ರದೇಶದಲ್ಲಿ ಹುಡುಗ, ಹುಡಿಗಿಯರು ರೇವ್ ಪಾರ್ಟಿ ನಡೆಸಿದ್ದು, ಗಾಂಜಾ ಸೇರಿದಂತೆ ವಿವಿಧ ಡ್ರಗ್ಸ್ ಸೇವಿಸಿ ಹುಚ್ಚೆದ್ದು ಕುಣಿದಿದ್ದಾರೆ. ಅರ್ಧಂಬಂರ್ಧ ಬಟ್ಟೆ ಹಾಕಿರುವ ಯುವಕ, ಯುವತಿಯರು ಡ್ರಗ್ಸ್ ನಶೆಯಲ್ಲಿ ತೇಲಿದ್ದಾರೆ.
Comments are closed.