ಕರಾವಳಿ

ಸಿಎಂ ಬೊಮ್ಮಾಯಿಗೆ ಬೆದರಿಕೆ: ಹಿಂದೂ ಮಹಾ ಸಭಾ ಮುಖಂಡ ಧರ್ಮೇಂದ್ರ ಬಂಧನ

Pinterest LinkedIn Tumblr

ಮಂಗಳೂರು: ಹಿಂದೂ ಮಹಾಸಭಾದ ಸದಸ್ಯರು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ ಮೈಸೂರಿನಲ್ಲಿ ದೇವಸ್ಥಾನವನ್ನು ಕೆಡವಿದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬೆದರಿಕೆ ಹಾಕಿದ ಆರೋಪದ ಬಳಿಕ ಪೊಲೀಸರು ಹಿಂದೂ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಅವರನ್ನು ವಶಕ್ಕೆ ಪಡೆದಿದ್ದಾರೆ.

ಮಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಪತ್ರಿಕಾಗೋಷ್ಠಿಯಲ್ಲಿ ಹಿಂದೂ ಮಹಾಸಭಾ ರಾಜ್ಯ ಪ್ರಧಾನ ಧರ್ಮೇಂದ್ರ ಅವರು, ನಾವು ಗಾಂಧಿಯನ್ನೇ ಬಿಟ್ಟಿಲ್ಲ ಗಾಂಧಿಯನ್ನೇ ಹತ್ಯೆ ಮಾಡಿದ್ದೇವೆ. ಹಿಂದೂಗಳ ಮೇಲೆ ದಾಳಿ ಆದಾಗ ಗಾಂಧಿಯನ್ನೇ ಬಿಟ್ಟಿಲ್ಲ. ಇನ್ನು ನಿಮ್ಮನ್ನು ಬಿಡುತ್ತೇವಾ?. ಬಿಜೆಪಿ ಒಂದು ಬೆನ್ನುಮೂಳೆ ಇಲ್ಲದ ಸರ್ಕಾರ. ಇವರಿಗಿಂತ ತಾಲಿಬಾನ್‌‌ಗಳು ವಾಸಿ. ಇವರ ಸರ್ಕಾರ ತಾಲಿಬಾನ್‌‌ಗಳಿಗಿಂತ ಕೀಳು ಎಂದಿದ್ದರು.

ಸಿಎಂ ಬೊಮ್ಮಾಯಿ ಅವರಿಗೆ ಬೆದರಿಕೆ ಹಾಕಿದ್ದಕ್ಕಾಗಿ ಧರ್ಮೇಂದ್ರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಅವರ ದೂರಿನ ಆಧಾರದ ಮೇಲೆ, ಬರ್ಕೆ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.

 

Comments are closed.