ಕರ್ನಾಟಕ

ಇಂಧನ ದರ, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್‌ನಿಂದ ಸೈಕಲ್ ಜಾಥಾ

Pinterest LinkedIn Tumblr

ಬೆಂಗಳೂರು: ಕೇಂದ್ರ ಸರ್ಕಾರದಿಂದ ನಿರಂತರ ಆಗುತ್ತಿರುವ ಇಂಧನ ಬೆಲೆ ಹೆಚ್ಚಳದಿಂದಾಗಿ ದಿನಬಳಕೆ ವಸ್ತುಗಳ ದರ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ವತಿಯಿಂದ ಇಂದು ಬೆಂಗಳೂರು ನಗರದಲ್ಲಿ ಸೈಕಲ್ ಜಾಥಾ ನಡೆಯಿತು.

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ವಿಧಾನಸೌಧವರೆಗೂ ನಡೆದ ಸೈಕಲ್ ಜಾಥಾದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಸೇರಿದಂತೆ ಪಕ್ಷದ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

ಬಳಿಕ ವಿಧಾನಸೌಧದ ಹೊರ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಆಡಳಿತಾರೂಢ ಬಿಜೆಪಿ ಸರ್ಕಾರವನ್ನು ಪಿಕ್ ಪಾಕೆಟ್ ಸರ್ಕಾರ ಎಂದು ಆರೋಪಿಸಿದರು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾಗಿದ್ದರೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಸರ್ಕಾರ ಇಳಿಸಿಲ್ಲ, ಅಗತ್ಯ ವಸ್ತುಗಳ ಬೆಲೆಯನ್ನು ಶೇಕಡಾ 20 ರಷ್ಟು ಇಳಿಸಬೇಕೆಂದು ಬೇಡಿಕೆಯನ್ನು ಸರ್ಕಾರ ಪರಿಗಣಿಸುತ್ತಿಲ್ಲ, ಕೋವಿಡ್-19 ಸಾಂಕ್ರಾಮಿಕ ಸಂದರ್ಭದಲ್ಲಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಲ್ಲಿಯೂ ಸರ್ಕಾರ ವಿಫಲವಾಗಿದೆ. ಇವೆಲ್ಲವನ್ನು ಜನರಿಗೆ ಮುಟ್ಟಿಸುವ ನಿಟ್ಟಿನಲ್ಲಿ ಸದನದ ಒಳಗೆ ಹಾಗೂ ಹೊರಗೆ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿರುವುದಾಗಿ ತಿಳಿಸಿದರು.

Comments are closed.