ಕರಾವಳಿ

ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ: ತಪ್ಪಿದ ಬಾರೀ ದುರಂತ

Pinterest LinkedIn Tumblr

ಬೆಳ್ತಂಗಡಿ: ಸಾವಿರಾರು‌ ಲೀಟರ್ ಇಂಧನ ತುಂಬಿದ ಟ್ಯಾಂಕರ್‌ವೊಂದು ಪಲ್ಟಿಯಾದ ಘಟನೆ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ನಡೆದಿದೆ.

ಘಾಟ್ ರಸ್ತೆಯ ಅಲೇಖಾನ್ ಸಮೀಪ ಈ ಘಟನೆ ನಡೆದಿದ್ದು, ಟ್ಯಾಂಕರ್‌ನಿಂದ ಭಾರೀ ಪ್ರಮಾಣದ ಪೆಟ್ರೋಲ್ ಸೋರಿಕೆಯಾಗಿದೆ ಎನ್ನಲಾಗಿದೆ.

ಮಂಗಳೂರಿನಿಂದ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನ ಮಾಗುಂಡಿಗೆ ಈ ಟ್ಯಾಂಕರ್ ಪೆಟ್ರೋಲ್ , ಡೀಸೆಲ್ ತುಂಬಿಸಿಕೊಂಡು ಹೋಗುತ್ತಿತ್ತು. ಚಾರ್ಮಾಡಿಯ ಅಲೇಖಾನ್ ಸಮೀಪ ಬರುತ್ತಿದ್ದಂತೆ ಟ್ಯಾಂಕರ್ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಈ ಟ್ಯಾಂಕರ್ 4 ಸಾವಿರ ಲೀಟರ್ ಪೆಟ್ರೋಲ್ ಮತ್ತು 4ಸಾವಿರ ಲೀಟರ್ ಡೀಸೆಲ್ ತುಂಬಿತ್ತು ಎನ್ನಲಾಗಿದೆ. ಕಳೆದ ಮೂರು ನಾಲ್ಕು ದಿನಗಳಿಂದ ಮಳೆಯಾಗದೇ ವಿಪರೀತ ಬಿಸಿಲಿನ ವಾತಾವರಣ ಇದ್ದ ಕಾರಣ ಟ್ಯಾಂಕರ್ ಪಲ್ಟಿ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿಗಳು ದೌಡಾಯಿಸಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ.

Comments are closed.