ಕರಾವಳಿ

ಸುರತ್ಕಲ್ ಬಳಿ ಜೊತೆಯಾಗಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಿಂದೂ ಕಾರ್ಯಕರ್ತರಿಂದ ಹಲ್ಲೆ ಆರೋಪ- ಐವರ ಬಂಧನ

Pinterest LinkedIn Tumblr

ಮಂಗಳೂರು: ವಾಹನವೊಂದರಲ್ಲಿ ಒಟ್ಟಿಗೆ ಪ್ರಯಾಣಿಸುತ್ತಿದ್ದ ಕೆಲವು ವಿದ್ಯಾರ್ಥಿಗಳ ಮೇಲೆ ಸಂಘಪರಿವಾರದ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಘಟನೆಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿದ್ದಾರೆ. ವೀಡಿಯೊದಲ್ಲಿ, ಗುಂಪೊಂದು ಕಾರನ್ನು ಅಡ್ಡಗಟ್ಟಿ‌ ಅದರಲ್ಲಿ ಕೂತಿರುವ ತಂಡಕ್ಕೆ ಅಶ್ಲೀಲ ಪದಗಳಿಂದ ನಿಂದಿಸುತ್ತಿರುವುದು ಕಂಡುಬರುತ್ತಿದೆ.

ಸುರತ್ಕಲ್ ಟೋಲ್ ಗೇಟ್ ಬಳಿ ಈ ಘಟನೆ ನಡೆದಿದೆ. ಪೊಲೀಸ್ ಅಧಿಕಾರಿಯ ಸಮ್ಮುಖದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ನೈತಿಕ ಪೊಲೀಸ್ ಗಿರಿ ಈ ಘಟನೆಗೆ ಸಂಬಂಧಿಸಿ, ಸುರತ್ಕಲ್ ಪೊಲೀಸರು ಐದು ಜನರನ್ನು ಬಂಧಿಸಿದ್ದಾರೆ.

ದೇರಳಕಟ್ಟೆಯ ಕಾಲೇಜಿನ ವಿದ್ಯಾರ್ಥಿನಿಯರು ಇನ್ನೊಂದು ಕೋಮಿನ ವಿದ್ಯಾರ್ಥಿಗಳೊಂದಿಗೆ ಸಂಚರಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ದಾಳಿ ನಡೆದಿದೆ ಎನ್ನಲಾಗಿದೆ.

Comments are closed.